ಭಾಲ್ಕಿ: ಇಲ್ಲಿಯ ಹಿರೇಮಠ ಸಂಸ್ಥಾನದ ಗುರುಪ್ರಸಾದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಆವರಣದಲ್ಲಿ ವಿದ್ಯಾರ್ಥಿ ಬಂಧುತ್ವ ವೇದಿಕೆ ಜಿಲ್ಲಾ ಘಟಕ ಬೀದರ್, ಹಿರೇಮಠ ಸಂಸ್ಥಾನದ ಸಹಯೋಗದಲ್ಲಿ ಶುಕ್ರವಾರ ಬಸವ ಪಂಚಮಿ ನಿಮಿತ್ತ ವಿದ್ಯಾರ್ಥಿಗಳಿಗೆ ಹಾಲು ವಿತರಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ವಿದ್ಯಾರ್ಥಿ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ರತ್ನದೀಪ ಕಸ್ತೂರೆ, ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ, ಕಸಾಪ ರಾಜ್ಯ ಮಹಿಳಾ ಪ್ರತಿನಿಧಿ ಮಲ್ಲಮ್ಮ ಆರ್ ಪಾಟೀಲ ಸೇರಿ ಇತರ ಪ್ರಮುಖರು ಇದ್ದರು.