ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್: ವೈಜಿನಾಥ ಕಮಠಾಣೆಗೆ ಬಸವ ಪುರಸ್ಕಾರ

Published 21 ಜೂನ್ 2024, 4:44 IST
Last Updated 21 ಜೂನ್ 2024, 4:44 IST
ಅಕ್ಷರ ಗಾತ್ರ

ಬೀದರ್: ಬೆಂಗಳೂರಿನ ಬಸವ ಪರಿಷತ್ ಸಂಸ್ಥೆಯಿಂದ ಪ್ರಸಕ್ತ ಸಾಲಿನ ಬಸವ ಪುರಸ್ಕಾರವನ್ನು ನಗರದ ಬಸವತತ್ವ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ವೈಜಿನಾಥ ಕಮಠಾಣೆ ಅವರಿಗೆ ಪ್ರದಾನ ಮಾಡಲಾಗಿದೆ.

ಬೆಂಗಳೂರಿನ ಕೊಂಡಾಜಿ ಬಸಪ್ಪ ಸಭಾಂಗಣದಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಮಠಾಣೆ ಅವರಿಗೆ ಪುರಸ್ಕಾರ ಪ್ರದಾನ ಮಾಡಿ ಗೌರವಿಸಿದರು.

ಶಿಕ್ಷಣ, ಬಸವ ತತ್ವ, ವಚನ ಸಾಹಿತ್ಯ ಪ್ರಚಾರ, ಪ್ರಸಾರ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಕಮಠಾಣೆ ಅವರಿಗೆ ಪುರಸ್ಕಾರ ನೀಡಲಾಗಿದೆ. ಕಮಠಾಣೆ ಹತ್ತು ವರ್ಷಗಳಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷರಾಗಿ, ರೆಡ್ ಕ್ರಾಸ್ ಸಂಸ್ಥೆ ರಾಜ್ಯ ನಿರ್ದೇಶಕರಾಗಿ, ಸಂಸ್ಥೆಯ ಶಿಕ್ಷಣ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಲಿಂಗಸಗೂರು ಅಂಕಲಗಿ ಮಠದ ವೀರಭದ್ರೇಶ್ವರ ಸ್ವಾಮೀಜಿ, ಬಸವ ಪರಿಷತ್ ಅಧ್ಯಕ್ಷ ಉಮಾದೇವಿ, ಪ್ರಧಾನ ಕಾರ್ಯದರ್ಶಿ ಮಹಾಂತೇಶ ಹಿರೇಮಠ, ಇಸ್ರೋದ ಎಂ.ಎಚ್.ಎಂ ದ್ವಾರಕೀಶ್, ಕಾಂಗ್ರೆಸ್‌ ಮುಖಂಡ ಧನರಾಜ ತಾಳಂಪಳ್ಳಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT