ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವ ಉತ್ಸವ

Last Updated 8 ಫೆಬ್ರುವರಿ 2023, 7:21 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನ ಮೋರಂಬಿ ಗ್ರಾಮದ ನಂದಿ ಬಸವೇಶ್ವರ ದೇವಾಲಯದಲ್ಲಿ ನಂದಿ ಬಸವೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಪ್ರಥಮ ವರ್ಷಾಚರಣೆ ಅಂಗವಾಗಿ ಫೆ. 8 ರಿಂದ 10 ರವರೆಗೆ ಬಸವ ಉತ್ಸವ, ಮೋರಂಬಿ ಉತ್ಸವ ನಡೆಯಲಿದೆ.

ಬುಧವಾರ ಬೆಳಿಗ್ಗೆ 9 ಗಂಟೆಗೆ ಹುಲಸೂರ ಗುರುಬಸವೇಶ್ವರ ಸಂಸ್ಥಾನ ಮಠದ ಡಾ.ಶಿವಾನಂದ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಡಾ.ಬಸವಲಿಂಗ ಅವಧೂತರ ನೇತೃತ್ವದಲ್ಲಿ ಕುಂಭಮೇಳ ಮೆರವಣಿಗೆ ಮತ್ತು ಉದ್ಘಾಟನೆ ನಡೆಯಲಿದೆ.

ಮಧ್ಯಾಹ್ನ 2 ಗಂಟೆಗೆ ನಡೆಯುವ ಯುವ ಸಮಾವೇಶವನ್ನು ಗಡಿಗೌಡ ಗಾಂವದ ಶಾಂತವೀರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಯುವ ನಾಯಕ ಪ್ರಸನ್ನ ಖಂಡ್ರೆ ಉದ್ಘಾಟಿಸಲಿದ್ದಾರೆ. ಸಂಜೆ 6 ಗಂಟೆಗೆ ನಡೆಯುವ ಕಲಿಯುಗದಲ್ಲಿ ಧರ್ಮ ಮತ್ತು ರಕ್ಷಣೆ ಕಾರ್ಯಕ್ರಮವನ್ನು ಮೆಹಕರ ರಾಜೇಶ್ವರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಚಪ್ಪ ಪಾಟೀಲ ಉದ್ಘಾಟಿಸಲಿದ್ದಾರೆ. ‌

ಫೆ.9 ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸ್ತ್ರೀ ಶಕ್ತಿ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಡಾ.ಅಕ್ಕ ಗಂಗಾಂಬಿಕೆ ನೇತೃತ್ವದಲ್ಲಿ ತಹ ಶೀಲ್ದಾರ್ ಕೀರ್ತಿ ಚಾಲಕ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ರೈತ ಸಮಾವೇಶ, ಸಂಜೆ 6 ಗಂಟೆಗೆ ಕುಟುಂಬ ಮತ್ತು ಮಕ್ಕಳಿಗೆ ಸಂಸ್ಕಾರ ಕಾರ್ಯಕ್ರಮ, ಫೆ.10ರಂದು ಬೆಳಿಗ್ಗೆ 8 ಗಂಟೆಗೆ ವಚನ ಸಾಹಿತ್ಯ ಮೆರವಣಿಗೆ, ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮೋರಂಬಿ ನಂದಿ ಬಸವೇಶ್ವರ ದೇವಾಲಯ ಸಮಿತಿ ಸದಸ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT