ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ: ಲಾರಿಯಲ್ಲಿ ಸಾಗಿಸುತ್ತಿದ್ದ ₹40 ಲಕ್ಷ ಮೌಲ್ಯದ ಸೀರೆ ಜಪ್ತಿ

Published 8 ಏಪ್ರಿಲ್ 2024, 12:50 IST
Last Updated 8 ಏಪ್ರಿಲ್ 2024, 12:50 IST
ಅಕ್ಷರ ಗಾತ್ರ

ಬಸವಕಲ್ಯಾಣ: ಲಾರಿಯೊಂದರಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದ ₹40 ಲಕ್ಷ ಮೌಲ್ಯದ ಸೀರೆಗಳನ್ನು ತಾಲ್ಲೂಕಿನ ರಾಷ್ಟ್ರೀಯ ‌ಹೆದ್ದಾರಿಯಲ್ಲಿನ ಮನ್ನಳ್ಳಿ ಚೆಕ್ ಪೋಸ್ಟ್ ನಲ್ಲಿ ಸೋಮವಾರ ಜಪ್ತಿ ಮಾಡಿಕೊಳ್ಳಲಾಗಿದೆ.

ಸೀರೆಗಳನ್ನು ಸೂರತ್ ನಿಂದ ಚೆನ್ನೈಗೆ ಸಾಗಿಸಲಾಗುತ್ತಿತ್ತು. ಈ ಸಂಬಂಧ ದಾಖಲೆ ಇಲ್ಲದ್ದರಿಂದ ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಲಾರಿ ಚಾಲಕನಿಂದ ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ‌ಮಹೇಶ ಪಾಟೀಲ ನೇತೃತ್ವದಲ್ಲಿ ಜಪ್ತಿ ಕಾರ್ಯ ನಡೆದಿದೆ. ಇಲಾಖೆಯ ಅಧಿಕಾರಿಗಳಾದ ಅಶೋಕ ಶೆಂಬೆಳ್ಳಿ, ಅಶೋಕ ಮಡಿವಾಳ, ನಂಜಯ್ಯ,‌ ಶರಣ ಎಳವಂತಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT