ಬಸವಕಲ್ಯಾಣ: ‘ಕೃಷಿ ಕ್ಷೇತ್ರದ ಜ್ಞಾನ ಹಾಗೂ ನಿರ್ವಹಣೆ ಮತ್ತು ಮಾರುಕಟ್ಟೆಯ ಮಾಹಿತಿ ನೀಡಿ, ರೈತರಿಗೆ ನೆರವಾಗುವುದಕ್ಕೆ ಶೀಘ್ರದಲ್ಲಿಯೇ ಹಳ್ಳಿಗಳಿಗೆ ಸಂಚರಿಸುವ ಅಭಿಯಾನ ಕೈಗೊಳ್ಳಲಾಗುತ್ತಿದೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಾಲ್ಲೂಕು ಸಂಯೋಜಕ ಸೂರ್ಯಕಾಂತ ಮದಕಟ್ಟಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರು ಆದಾಯ ಹೆಚ್ಚಿಸಿಕೊಳ್ಳಲು ಸ್ಥಳೀಯ, ರಾಜ್ಯ, ಅನ್ಯ ರಾಜ್ಯಗಳ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯ ಜ್ಞಾನ, ನಿರ್ವಹಣ ಕೌಶಲ, ಮಾರುಕಟ್ಟೆ ಹಾಗೂ ಸರ್ಕಾರದ ನೀತಿಯ ಬಗ್ಗೆ ತಿಳಿದುಕೊಳ್ಳುವುದು ಅತ್ಯಂತ ಅವಶ್ಯವಾಗಿದೆ. ಆದರೆ, ಈ ಬಗ್ಗೆ ಅರಿವಿಲ್ಲದೆ ಸಣ್ಣ ಮತ್ತು ಅತಿ ಸಣ್ಣ ರೈತರು ಹೆಚ್ಚಿನ ಉತ್ಪನ್ನ ಪಡೆಯುತ್ತಿಲ್ಲ. ಮಾಡಿದ ಸಾಲ ತೀರಿಸಲಾಗದೆ ಒದ್ದಾಡುತ್ತಿದ್ದಾರೆ. ಕೆಲವರು ತಮ್ಮ ಜೀವ ಕಳೆದುಕೊಂಡಿದ್ದಾರೆ. ರೈತರ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ ಎಂಬುದರ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದು ಹೇಳಿದರು.

‘ಆದಾಯದ ಅರ್ಧ ಭಾಗದಷ್ಟು ಪಾಲು ಕೂಲಿ ಕಾರ್ಮಿಕರು, ವ್ಯಾಪಾರಿಗಳು, ಕಮಿಷನ್ ಏಜೆಂಟರು, ಹಮಾಲರು ಪಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ನೀತಿ ನಿಯಮಗಳು ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುತ್ತಿಲ್ಲ. ಬದಲಿಗೆ ಕೇವಲ ಕಣ್ಣೋರೆಸುವ ಕೆಲಸ ಮಾಡುತ್ತಿವೆ. ರಾಜಕೀಯ ಪಕ್ಷಗಳು ರೈತರನ್ನು ಮತ ಬ್ಯಾಂಕ್ಗಳನ್ನಾಗಿ ಉಪಯೋಗಿಸುತ್ತಿದ್ದಾರೆ. ಕೃಷಿ ನಿರ್ವಹಣೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ದುಬಾರಿ ಆಗುತ್ತಿದೆ. ಆದರೆ, ಫಸಲು ಮಾರುಕಟ್ಟೆಗೆ ಬಂದಾಗ ದಿಢೀರನೆ ಅವುಗಳ ಬೆಲೆ ಕಡಿಮೆ ಆಗುತ್ತಿದೆ. ಆದರೆ ನಷ್ಟ ಅನುಭವಿಸುವುದು ಮಾತ್ರ ರೈತರಿಗೆ ತಪ್ಪುತ್ತಿಲ್ಲ’ ಎಂದು ಹೇಳಿದರು.

‘ಅಖಿಲ ಭಾರತ ಕಿಸಾನ್ ಸಭಾ ಮತ್ತು ರಾಜ್ಯ ರೈತ ಸಂಘ, ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ನಡೆಸುವ ಅಭಿಯಾನಕ್ಕಾಗಿ ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ 9590272020, 9845371698, 9880954088, 9900526903 ಸಂಪರ್ಕಿಸಬೇಕು’ ಎಂದು ಹೇಳಿದರು.

ರೈತ ಮುಖಂಡರಾದ ರಾಮಯ್ಯ ಮಠಪತಿ, ಕಾಶಿನಾಥ ಬಿರಾದಾರ ಬೇಲೂರ, ಖಾನ್ ಸಾಬ್ ನಾರಾಯಣಪುರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.