ಬಸವಕಲ್ಯಾಣ: ನಗರದ ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮದಲ್ಲಿ ಶೇ 100 ರಷ್ಟು ತೆರಿಗೆ ಸಂಗ್ರಹಿಸಿ ಉತ್ತಮ ಸಾಧನೆ ತೋರಿದ ತಾಲ್ಲೂಕಿನ ಆಲಗೂಡ ಗ್ರಾಮ ಪಂಚಾಯಿತಿಯ ಸಿಬ್ಬಂದಿಯವರನ್ನು ಸನ್ಮಾನಿಸಲಾಯಿತು.

ಪಿಡಿಒ ಸುಲೋಚನಾ ಬಂಡೆ, ಸಿಬ್ಬಂದಿ ಮಹಾದೇವ ಬೆಳಮಗೆ, ದಯಾನಂದ ಪಾಟೀಲ, ಕುಮಾರ ಗುರವ ಅವರನ್ನು ಸನ್ಮಾನಿಸಲಾಯಿತು.

ಇಒ ರಮೇಶ ಸುಲ್ಫಿ ಮಾತನಾಡಿ, ‘ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ತೆರಿಗೆ ವಸೂಲಾತಿ ಅತ್ಯಂತ ಮುಖ್ಯವಾಗಿದೆ. ಪಂಚಾಯಿತಿ ಸಿಬ್ಬಂದಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೆ, ಕರ್ತವ್ಯ ನಿಷ್ಠರಾದರೆ ಗ್ರಾಮೀಣ ಪ್ರದೇಶದ ವಿಕಾಸ ಸಾಧ್ಯವಾಗುತ್ತದೆ. ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಯಾವುದೇ ಕೆಲಸದಲ್ಲಿ ಯಶಸ್ಸು ದೊರಕುತ್ತದೆ’ ಎಂದರು.

ತಾಲ್ಲೂಕು ಪಂಚಾಯಿತಿ ಯೋಜನಾ ಸಹಾಯಕ ನಿರ್ದೇಶಕ ಸಲೀಂ, ಅರುಣಕುಮಾರ ಪಾಟೀಲ ಮಾತನಾಡಿದರು. ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-33-1355435499

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.