ಬೀದರ್: ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಗೆ ಸಂಬಂಧಿಸಿದಂತೆ ₹50 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಸವಕಲ್ಯಾಣಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ 2026ರ ಒಳಗೆ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡುವುದಾಗಿ ಘೋಷಿಸಿದ್ದಾರೆ. ಕಾಮಗಾರಿ ಭರದಿಂದ ಸಾಗಿದೆ. ಗುತ್ತಿಗೆದಾರರಿಗೆ ಸುಮಾರು ₹73 ಕೋಟಿ ಹಣ ಪಾವತಿ ಆಗಬೇಕಿದೆ. ಈ ಪೈಕಿ ಗುರುವಾರ ₹50 ಕೋಟಿ ಜಿಲ್ಲಾಧಿಕಾರಿ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ತಾವು ಮಾಡಿದ ಮನವಿಯ ಮೇರೆಗೆ ಈಗ ಹಣ ಬಿಡುಗಡೆಯಾಗಿದ್ದು, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ, ಮುಂದಿನ ವರ್ಷ ಲೋಕಾರ್ಪಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸುಮಾರು ₹700 ಕೋಟಿ ವೆಚ್ಚದಲ್ಲಿ ಆಧುನಿಕ ಅನುಭವ ಮಂಟಪ ಭವ್ಯ, ದಿವ್ಯವಾಗಿ ನಿರ್ಮಾಣವಾಗುತ್ತಿದೆ. ಬಸವಾದಿ ಶರಣರ ಕೊಡುಗೆಯನ್ನು ಇಡೀ ವಿಶ್ವಕ್ಕೆ ಸಾರಲಿದೆ. ಇಷ್ಟಲಿಂಗ ಪೂಜೆಯ ವೈಜ್ಞಾನಿಕ ಅಂಶಗಳೂ ಇಲ್ಲಿದ್ದು, ಜಗತ್ತಿನಾದ್ಯಂತ ಪ್ರವಾಸಿಗರನ್ನು ತನ್ನತ್ತ ಸೆಳೆಯಲಿದೆ ಎಂದಿದ್ದಾರೆ.

ಆಧುನಿಕ ಅನುಭವ ಮಂಟಪದಲ್ಲಿರುವ 770 ಕಂಬಗಳ ಮೇಲೆ 770 ಅಮರ ಗಣಂಗಳ ವಚನಗಳನ್ನು ಕೆತ್ತಲಾಗಿದೆ. ಕಾಮಗಾರಿಗಾಗಿ ಅಗತ್ಯ ಹಣ ಬಿಡುಗಡೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.