ಬೀದರ್: ಬಸವಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ ಅನುಭವ ಮಂಟಪವನ್ನು ಬರುವ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಲು ಕಾಮಗಾರಿಯನ್ನು ತ್ವರಿತಗೊಳಿಸುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಮಗಾರಿ ವಿಳಂಬವಾಗದಂತೆ ಕ್ರಮ ವಹಿಸಬೇಕು. ಅನುಭವ ಮಂಟಪ ಹಾಗೂ ಇನ್ನಿತರೆ ಸ್ಮಾರಕಗಳ ಅಭಿವೃದ್ಧಿಯನ್ನು ಗಡುವಿನಲ್ಲಿ ಪೂರ್ಣಗೊಳಿಸಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೂಡಾ ಪ್ರಗತಿ ಪರಿಶೀಲನೆ ಸಭೆ ನಡೆದಿದೆ. ಅವರ ಮಾರ್ಗದರ್ಶನದಂತೆ ಈಗಾಗಲೇ ಕ್ರಮ ವಹಿಸಲಾಗಿದೆ. ಜಿಲ್ಲಾಡಳಿತ ಮತ್ತು ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಹೆಚ್ಚು ಕ್ರಿಯಾಶೀಲವಾಗಿ ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಶ್ರಮವಹಿಸಬೇಕು ಎಂದು ಹೇಳಿದರು.

2023ರಿಂದ ಈಚೆಗೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹280 ಕೋಟಿ ಅನುಭವ ಮಂಟಪ ಅಭಿವೃದ್ಧಿಗೆ ಮಂಜೂರು ಮಾಡಿದ್ದಾರೆ. ಶೇ 65ರಷ್ಟು ಆರ್ಥಿಕ ಪ್ರಗತಿಯಾಗಿದೆ. ಶೇ 70ರಷ್ಟು ಕಾಮಗಾರಿಯೂ ಪೂರ್ಣಗೊಂಡಿದೆ ಎಂದು ತಿಳಿಸಿದರು. ಬಸವ ಸಮಿತಿಯ ಅರವಿಂದ ಜತ್ತಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.