ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆ: ಎಲ್ಲ 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

Last Updated 31 ಮಾರ್ಚ್ 2021, 12:27 IST
ಅಕ್ಷರ ಗಾತ್ರ

ಬೀದರ್‌: ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಗೆ ಸ್ಪರ್ಧೆ ಬಯಸಿ ಸಲ್ಲಿಸಿದ ಎಲ್ಲ 14 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

14 ಜನ ಅಭ್ಯರ್ಥಿಗಳು ಎರಡು ಹಾಗೂ ಮೂರು ಪ್ರತಿಗಳಲ್ಲಿ ಒಟ್ಟು 24 ನಾಮಪತ್ರಗಳನ್ನು ಸಲ್ಲಿಸಿದ್ದರು. ನಾಮಪತ್ರಗಳ ಪರಿಶೀಲನೆಯಲ್ಲಿ ಮೂರು ಅರ್ಜಿಗಳು ತಿರಸ್ಕೃತಗೊಂಡಿವೆ. ಆದರೆ, ನಾಮಪತ್ರ ಸಲ್ಲಿಸಿದ ಎಲ್ಲರೂ ಚುನಾವಣಾ ಕಣದಲ್ಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ರಾಮಚಂದ್ರನ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ನ ಮಾಲಾ ನಾರಾಯಣರಾವ್, ಬಿಜೆಪಿಯ ಶರಣು ಸಲಗರ, ಜೆಡಿಎಸ್‌ನ ಸಯ್ಯದ್‌ ಯಸ್ರಬ್ಅಲಿ ಖಾದ್ರಿ,
ಎನ್‌ಸಿಪಿಯ ಮಾರುತಿರಾವ್ ಮುಳೆ, ಶಿವಸೇನಾದ ಅಂಕುಶ್‌ ಮಹಾದೇವ, ಹಿಂದೂಸ್ತಾನ್ ಜನತಾ ಪಾರ್ಟಿಯ ಶ್ರೀವೆಂಟಕೇಶ್ವರ ಮಹಾಸ್ವಾಮಿ, ಕರ್ನಾಟಕ ರಾಷ್ಟ್ರ ಸಮಿತಿಯ ಮಂಜುನಾಥ ಶೃಂಗೇರಿ, ಎಐಎಂಐಎಂನ ಅಬ್ದುಲ್‌ ರಜಾಕ್, ಅಖಿಲ ಭಾರತೀಯ ಮುಸ್ಲಿಂ ಲೀಗ್(ಸೆಕ್ಯುಲರ್)ನ ಫರ್ಜಾನಾ ಬೇಗಂ, ಪಕ್ಷೇತರ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖೂಬಾ, ಅಂಬ್ರೋಸ್ ಮೆಲ್ಲೊ, ಅಲ್ತಾಫ್ ಫತ್ರುಸಾಬ, ಈರಣ್ಣ ಹಡಪದ, ರವಿಕಿರಣ ನರಸೇಗೌಡ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಹೇಳಿದ್ದಾರೆ.

ಏಪ್ರಿಲ್‌ 3ರ ವರೆಗೆ ನಾಮಪತ್ರಗಳ ಹಿಂದಕ್ಕೆ ಪಡೆಯಲು ಅವಕಾಶ ಇದೆ. ಏಪ್ರಿಲ್ 17ರಂದು ಮತದಾನ ಹಾಗೂ ಮೇ 2 ರಂದು ಮತಗಳ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT