ಮಂಗಳವಾರ, ಮೇ 17, 2022
27 °C

ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆ, ಸಮರ್ಥ ಅಭ್ಯರ್ಥಿಗೆ ಬಿಜೆಪಿ ಟಿಕೆಟ್: ಖೂಬಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ವರಿಷ್ಠರು ಗೆಲ್ಲುವ ಸಮರ್ಥ ಅಭ್ಯರ್ಥಿಗೆ ಟಿಕೆಟ್ ಕೊಡಲಿದ್ದಾರೆ ಎಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಉಸ್ತುವಾರಿಯಾದ ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ಬಿಜೆಪಿ ಟಿಕೆಟ್‍ಗೆ ಹಲವರು ಆಕಾಂಕ್ಷಿಗಳು ಇದ್ದಾರೆ. ವರಿಷ್ಠರು ಅಳೆದು ತೂಗಿ ಒಬ್ಬರನ್ನು ಆಯ್ಕೆ ಮಾಡಲಿದ್ದಾರೆ. ಉಳಿದವರು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಉಪ ಚುನಾವಣೆ ತಯಾರಿಗೆ ಸಂಬಂಧಿಸಿದಂತೆ ಅನೇಕ ಬಾರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲಾಗಿದೆ. ಎಲ್ಲ ಹಂತದಲ್ಲೂ ಪಕ್ಷದ ಸಂಘಟನೆ ಬಲವಾಗಿದೆ ಎಂದು ತಿಳಿಸಿದ್ದಾರೆ.

ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಪಕ್ಷದ ಸಾಧನೆಗಳ ಪ್ರಚಾರ ಮಾಡಿ, ಹಗಲಿರುಳು ಶ್ರಮಿಸಿ, ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದೇವೆಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಭರವಸೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿವೆ. ಸಿದ್ದರಾಮಯ್ಯ ಅವರ ಐದು ವರ್ಷಗಳ ದುರಾಡಳಿತವನ್ನು ಜನ ಮರೆತಿಲ್ಲ. ಉತ್ತಮ ಆಡಳಿತ ಹಾಗೂ ಬಸವಕಲ್ಯಾಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಪಕ್ಷದ ಅಭ್ಯರ್ಥಿ ಗೆಲುವಿಗೆ ದಾರಿ ಮಾಡಿಕೊಡಲಿದೆ ಎಂದು ತಿಳಿಸಿದ್ದಾರೆ.

ಕಟಿಲ್ ಭೇಟಿ: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ ಮಾಡಿದ್ದಕ್ಕೆ ಖೂಬಾ ಅವರು ನವದೆಹಲಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನಕುಮಾರ ಕಟಿಲ್ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.

ವಿಧಾನಸಭಾ ಉಪ ಚುನಾವಣೆ ಕುರಿತು ಚರ್ಚೆ ನಡೆಸಿದರು. ಬಾಗಲಕೋಟೆ ಸಂಸದ ಪಿ.ಸಿ. ಗದ್ದಗೌಡರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು