ಬಸವಕಲ್ಯಾಣ: ‘ಇಲ್ಲಿನ ಉಪ ನೋಂದಣಾಧಿಕಾರಿ, ನಗರಸಭೆ, ತಹಶೀಲ್ದಾರ್ ಮತ್ತು ಆರ್ಟಿಒ ಕಚೇರಿಗಳಲ್ಲಿ ಲಂಚದ ರೂಪದಲ್ಲಿ ನಿರಂತರ ಹಣ ಸುಲಿಗೆ ನಡೆಯುತ್ತಿದ್ದು, ಜನಪ್ರತಿನಿಧಿಗಳು ಮತ್ತು ಮೇಲಧಿಕಾರಿಗಳು ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದೀಪಕ ಮಾಲಗಾರ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ‘ಜನರು ಇಂಥ ವ್ಯವಸ್ಥೆಯ ವಿರುದ್ಧ ಹೋರಾಟ ನಡೆಸಬೇಕು. ಧ್ವನಿ ಎತ್ತುವ ಧೈರ್ಯ ತೋರಬೇಕು. ಯಾವುದೇ ಕೆಲಸವಿದ್ದರೂ ಹಣ ನೀಡದೆ ಆಗುತ್ತಿಲ್ಲ. ಶಾಸಕ ಶರಣು ಸಲಗರ ಅವರು ಪ್ರತಿದಿನ ಒಂದೊಂದು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿರುವುದು ಉತ್ತಮ ಕಾರ್ಯ. ಅದರಂತೆ ಪ್ರತಿ ಸರ್ಕಾರಿ ಕಚೇರಿಗೂ ಹೋಗಿ ಜನರ ಕೆಲಸ ಕಾರ್ಯಗಳು ಶೀಘ್ರದಲ್ಲಿ ಆಗುವಂತೆ ನೋಡಿಕೊಳ್ಳಬೇಕು. ಹಣದ ವ್ಯವಹಾರ ಕಂಡು ಬಂದರೆ ಸಂಬಂಧಿತರನ್ನು ಅಮಾನತುಗೊಳಿಸಲು ಶಿಫಾರಸ್ಸು ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-33-1261401472

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.