ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಕಲಖೋರಾ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಎಸಗಿದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಒಬ್ಬ ಯುವಕ ಹಾಗೂ ಮೂವರು ಅಪ್ರಾಪ್ತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಖೋರಾ ಗ್ರಾಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಕಾಲಿನಿಂದ ತುಳಿದು ಅಪಮಾನ ಮಾಡಲಾಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಜನವರಿ 1ರಂದು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐದು ಜನ ಆರೋಪಿಗಳ ವಿರುದ್ಧ ಕಲಂ 189(2), 353(2), 298, 190ರ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.