ಬಸವಕಲ್ಯಾಣ: ‘ಬರೀ ತೋರಿಕೆಗೆ ಯಾರೂ ಮಹತ್ವ ನೀಡುವುದಿಲ್ಲ. ಕರ್ತವ್ಯನಿಷ್ಠರಿಗೆ ಮಾತ್ರ ಜನಮನ್ನಣೆ ದೊರಕುತ್ತದೆ ಹಾಗೂ ಇಲಾಖೆಯವರ ಪ್ರಶಂಸೆಗೆ ಪಾತ್ರರಾಗುತ್ತಾರೆ’ ಎಂದು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸಂಜೀವಕುಮಾರ ಕಾಂಗೆ ಹೇಳಿದ್ದಾರೆ.

ತಾಲ್ಲೂಕಿನ ಮೋರಖಂಡಿವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ಸೇವಾನಿವೃತ್ತ ಮುಖ್ಯಶಿಕ್ಷಕ ಶಾಲಿವಾನ ಕಾಕನಾಳೆ ಅವರ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹುಲಸೂರ ತಾಲ್ಲೂಕು ಘಟಕದ ಅಧ್ಯಕ್ಷ ರಾಜಪ್ಪ ನಂದೋಡೆ, ಪ್ರೌಢಶಾಲೆ ಮುಖ್ಯಶಿಕ್ಷಕ ರವೀಂದ್ರ ಬಿರಾದಾರ, ಸಂಪನ್ಮೂಲ ವ್ಯಕ್ತಿ ಬಾಲಾಜಿ ಬಿರಾದಾರ, ಗ್ರಾಮಸ್ಥ ಅನಿಲ ಪವಾರ ಮಾತನಾಡಿದರು.

ಇದೇ ವೆಳೆ ಶಾಲಿವಾನ ಕಾಕನಾಳೆ ಅವರಿಗೆ ಗ್ರಾಮಸ್ಥರಿಂದ ವಿಶೇಷ ಸನ್ಮಾನ ನಡೆಯಿತು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷಕುಮಾರ ಅಕ್ಕಣ್ಣ, ಜಿಲ್ಲಾ ಉಪಾಧ್ಯಕ್ಷ ಅಲ್ಲಾವುದ್ದೀನ್ ಪಟೇಲ್, ಸೂರ್ಯಕಾಂತ ಪಾಟೀಲ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ ಮಾನೆ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಶರಣಬಸಪ್ಪ ಬಿರಾದಾರ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಅಶೋಕ ರಾಯಪಳ್ಳೆ, ಧನರಾಜ ಮಾನೆ, ಶಿವರಾಜ ಮಾಶೆಟ್ಟೆ, ಕಲ್ಯಾಣರಾವ್ ಮದರಗಾಂವಕರ್, ಧನರಾಜ ರಾಜೋಳೆ, ಮಾರುತಿ ಫುಲೆ, ದಿನೇಶ ಗೊಂಟಲ್ ಹಾಗೂ ಗ್ರಾಮಸ್ಥರು ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-33-971107112

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.