ಬಸವಕಲ್ಯಾಣ: ‘ಮುಂಗಾರು ಪೂರ್ವದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಿ ರೈತರಿಗೆ ಅನುಕೂಲತೆ ಕಲ್ಪಿಸಬೇಕು’ ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ, ರಾಜ್ಯ ರೈತ ಸಂಘ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಸೋಮವಾರ ತಹಶೀಲ್ದಾರ್ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

ರಸಗೊಬ್ಬರವನ್ನೂ ಮುಂಚಿತ ವಾಗಿಯೇ ಒದಗಿಸಬೇಕು. ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನಃ ಆರಂಭಿಸಬೇಕು. ಎಪಿಎಂಸಿ ಮಾರುಕಟ್ಟೆಯಲ್ಲಿ ಹಲವಾರು ರೀತಿಯಲ್ಲಿ ರೈತರಿಗೆ ಶೋಷಣೆ ಆಗುತ್ತಿದೆ. ಅದನ್ನು ತಪ್ಪಿಸುವುದಕ್ಕೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಅಖಿಲ ಭಾರತ ಕಿಸಾನ್ ಸಭಾ ಅಧ್ಯಕ್ಷ ಸೂರ್ಯಕಾಂತ ಮದಕಟ್ಟಿ, ಶಿವರಾಜ ಬೊಕ್ಕೆ, ಕಾಶಿನಾಥ ಬಿರಾದಾರ, ಕಿಶೋರ ಶುಕ್ಲಾ, ಖಾನಸಾಬ್, ಕಲ್ಲಪ್ಪ ಗುಂಗೆ, ಕಾಶಿಮಸಾಬ್, ಬಾಬು ಗೌರ, ನಜಿಮೊದ್ದೀನ್, ಮೈನೊದ್ದೀನ್, ವೀರಾರೆಡ್ಡಿ ಪಾಟೀಲ, ಹಣಮಂತ ಶೆಟ್ಟೆಬಾ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-33-841354431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.