ಬಸವಕಲ್ಯಾಣ: ‘ನಗರದಲ್ಲಿ ತಾಲ್ಲೂಕು ಆಡಳಿತದಿಂದ ಮೇ 10ರಂದು ಆಯೋಜಿಸುವ ಮಹಾಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯಲ್ಲಿ ಬಹುಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ತಾಲ್ಲೂಕು ರೆಡ್ಡಿ ಸಮಾಜ ಸಂಘದ ಅಧ್ಯಕ್ಷ ವಿಜಯಕುಮಾರ ರೆಡ್ಡಿ ವಿನಂತಿಸಿದರು.

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಐತಿಹಾಸಿಕ ಕೋಟೆಯಿಂದ ಮುಖ್ಯರಸ್ತೆಯ ಮೂಲಕ ಡಾ.ಅಂಬೇಡ್ಕರ್ ವೃತ್ತ ಮತ್ತು ಅಲ್ಲಿಂದ ತೇರು ಮೈದಾನದಲ್ಲಿನ ಸಭಾ ಭವನದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಸಮಾಜದವರು ಹಾಗೂ ಇತರರು ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರೆ ಜಯಂತಿಯ ಸಂಭ್ರಮ ಅಧಿಕಗೊಳ್ಳುತ್ತದೆ’ ಎಂದರು.

ಸಮಾಜ ಸಂಘದ ಪ್ರಮುಖರಾದ ಹೇಮರೆಡ್ಡಿ ಗೌರೆ, ಪ್ರಕಾಶರೆಡ್ಡಿ ನರಹರೆ, ಸಂಘದ ಉಪಾಧ್ಯಕ್ಷ ರಾಜರೆಡ್ಡಿ ಪಾಟೀಲ, ಸಂಜೀವರೆಡ್ಡಿ ಗೌಂಡಗಾವೆ, ಮಾಣಿಕರೆಡ್ಡಿ ಯಡಮಲ್ಲೆ, ಗೋವಿಂದರೆಡ್ಡಿ ಕೋತಾಪಲ್ಲೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-33-211911414

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.