ಬೀದರ್: ಬರುವ ಜೂನ್ನಲ್ಲಿ ಬಸವಕಲ್ಯಾಣದ ಥೇರ್ ಮೈದಾನದಲ್ಲಿ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬಸವಾದಿ ಶರಣರ ಹಿಂದೂ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜೇಶ್ವರ ಮಠದ ಘನಲಿಂಗ ರುದ್ರಮುನಿ ಶಿವಾಚಾರ್ಯರು ತಿಳಿಸಿದರು.

ಹರಿದು ಹಂಚಿ ಹೋಗುತ್ತಿರುವ ಹಿಂದೂ ಸಮಾಜವನ್ನು ಒಗ್ಗೂಡಿಸುವುದು ಹಾಗೂ ಅವರ ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿ ಕಲಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ. ಬೀದರ್ ಜಿಲ್ಲಾ ಮಠಾಧೀಶರ ಒಕ್ಕೂಟ ಈ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಕಾಂಗ್ರೆಸ್ ಮುಖಂಡ ಗುಂಡುರಡ್ಡಿ ಮಾತನಾಡಿ, ಕನೇರಿ ಶ್ರೀಗಳು ಈಗಾಗಲೇ ವಿಜಯಪುರ ಜಿಲ್ಲೆಯ ಬಬಲಾದಿಯಿಂದ ಬಸವಾದಿ ಶರಣರ ಹಿಂದೂ ಜಾಗೃತಿ ಸಮಾವೇಶ ಅಭಿಯಾನ ಆರಂಭಿಸಿದ್ದಾರೆ. ಸೋಮವಾರ (ಮೇ 18) ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಈ ಅಭಿಯಾನ ಜರುಗಲಿದೆ. ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಜೂನ್ ಅಂತ್ಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಬಸವಪರ ಸಂಘಟನೆಗಳನ್ನು ಸಹ ಈ ಕಾರ್ಯಕ್ರಮಕ್ಕೆ ಮುಕ್ತವಾಗಿ ಆಹ್ವಾನಿಸಲಾಗುತ್ತದೆ. ಶ್ರೀಗಳು ಹೇಳಿದಂತೆ ಹಿಂದೂ ಧರ್ಮೀಯರನ್ನು ಒಂದೆಡೆ ಸೇರಿಸುವ ಒಂದೇ ಒಂದು ಉದ್ದೇಶ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಬಸವಕಲ್ಯಾಣ ತ್ರಿಪುರಾಂತ ಗವಿಮಠದ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು, ಶಿವಣಿ, ಹಲಬರ್ಗಾ ಹಾಗೂ ಹೈದರಾಬಾದಿನ ಹಾವಗಿಲಿಂಗೇಶ್ವರ ಶಿವಾಚಾರ್ಯರು, ಹಿರೇನಾಗಾಂವದ ಜಯಶಾಂತಲಿಂಗ ಸ್ವಾಮೀಜಿ, ಅಷ್ಟಗಿಯ ನಿಜಲಿಂಗ ಶಿವಾಚಾರ್ಯರು, ಕಲ್ಲೂರಿನ ಮೃತ್ಯುಂಜಯ ಶಿವಾಚಾರ್ಯರು, ಲಾಡಗೇರಿಯ ಗಂಗಾಧರ ಶಿವಾಚಾರ್ಯರು, ಸಿಂಧನಕೇರಾದ ಹೊನ್ನಲಿಂಗ ಸ್ವಾಮೀಜಿ, ಯದಲಾಪುರದ ಶಿವಶಂಕರ್ ಶಿವಾಚಾರ್ಯರು, ಹುಡಗಿ ವಿರಕ್ತ ಮಠದ ಚನ್ನಮಲ್ಲ ಸ್ವಾಮೀಜಿ, ಚಾಂಬೋಳದ ರುದ್ರಮುನಿ ಶಿವಾಚಾರ್ಯರು, ಮಂಠಾಳದ ಚನ್ನಬಸವ ಸ್ವಾಮೀಜಿ, ಖಟಕ ಚಿಂಚೋಳಿಯ ಬಸವಲಿಂಗ ಶಿವಾಚಾರ್ಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-33-2011743768

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.