ಬಸವಕಲ್ಯಾಣ: ನಗರದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳು ಮಂಗಳವಾರ ಅಲ್ಲಿ ನೀಡಿದ ಕಳಪೆ ಆಹಾರವನ್ನು ಹಾಗೂ ಕೊಳೆತ ತರಕಾರಿಯನ್ನು ತಟ್ಟೆಯಲ್ಲಿ ತಂದು ಶಾಸಕ ಶರಣು ಸಲಗರ ಅವರಿಗೆ ತೋರಿಸಿದರು.

ತ್ರಿಪುರಾಂತ ಕೆರೆ ದಂಡೆಯಲ್ಲಿನ ಖಾನಾಪುರ ವ್ಯಾಪ್ತಿಯಲ್ಲಿನ ವಿದ್ಯಾರ್ಥಿನಿಲಯದಿಂದ ಕೆಲ ವಿದ್ಯಾರ್ಥಿಗಳು ರಾತ್ರಿ 10 ಗಂಟೆಗೆ ಕತ್ತಲಲ್ಲಿಯೇ ಶಾಸಕರ ಕಚೇರಿಯವರೆಗೆ 2 ಕಿ.ಮೀ ದೂರದವರೆಗೆ ನಡೆದುಕೊಂಡು ಬಂದು ಕಳಪೆ ಆಹಾರ ಅವರಿಗೆ ತೋರಿಸಿದ್ದಾರೆ. ನಿತ್ಯವೂ ಇಂಥದ್ದೇ ಆಹಾರ ನೀಡಲಾಗುತ್ತದೆ ಎಂದು ದೂರಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರು ವಿದ್ಯಾರ್ಥಿನಿಲಯದ ವಾರ್ಡನ್ ಮತ್ತು ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸಹ ಫೋನ್ ಮೂಲಕ ಸಂಪರ್ಕಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರದಲ್ಲಿ ಕ್ರಮ ತೆಗೆದುಕೊಳ್ಳಬೇಕು. ಇನ್ನು ಮುಂದೆ ಉತ್ತಮ ಆಹಾರ ನೀಡಬೇಕು ಎಂದು ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-33-1068169973

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.