ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

Published 28 ಮೇ 2024, 16:06 IST
Last Updated 28 ಮೇ 2024, 16:06 IST
ಅಕ್ಷರ ಗಾತ್ರ

ಬಸವಕಲ್ಯಾಣ: ಉದ್ಯೋಗ ಖಾತರಿ ಯೋಜನೆಯ ಕಾಯಕ ಮಿತ್ರ ಎಂದು ಕೆಲಸ ನಿರ್ವಹಿಸುವ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ತಾಲ್ಲೂಕಿನ ಹಾರಕೂಡ ಗ್ರಾಮ ಪಂಚಾಯಿತಿ ಪಿಡಿಒ ಯೋಗೇಶ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆಗ್ರಹಿಸಿ ಮಾನವ ಬಂಧುತ್ವ ವೇದಿಕೆಯಿಂದ ತಾಲ್ಲೂಕು ಪಂಚಾಯಿತಿ ಇಒ ರಮೇಶ ಸುಲ್ಫಿ ಅವರಿಗೆ ಮಂಗಳವಾರ ಮನವಿಪತ್ರ ಸಲ್ಲಿಸಲಾಯಿತು.

ಪಿಡಿಒ ಅವರನ್ನು ವಜಾಗೊಳಿಸಿ ಮಹಿಳೆಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಲಾಯಿತು.

ಮಾನವ ಬಂಧುತ್ವ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಪಿಂಟು ಕಾಂಬಳೆ, ಮುಖಂಡ ವಿಜಯಕುಮಾರ ಡಾಂಗೆ, ರಿಪಬ್ಲಿಕನ್ ಪಕ್ಷದ ಮುಖಂಡ ದತ್ತಾತ್ತೇಯ ಸೂರ್ಯವಂಶಿ, ಮಹಾದೇವ ಗಾಯಕವಾಡ, ದಲಿತ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಫುಲ್ ಗಾಯಕವಾಡ, ಅರುಣ ಗಾಯಕವಾಡ, ಯಶವಂತ ಕಾಂಬಳೆ, ಸಾಗರ ರಾಯಗೋಳ, ಮನೋಜ ಖೇಲೆ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT