ಬಸವಕಲ್ಯಾಣ: ನಗರದಲ್ಲಿ ಬಸವ ಜಯಂತಿ ಅಂಗವಾಗಿ ಆಯೋಜಿಸಿದ್ದ ಬಸವೇಶ್ವರರ ಜಾತ್ರೆಯ ರಥೋತ್ಸವದಲ್ಲಿ ತೇರಿನಡಿ ಸಿಲುಕಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದರಿಂದ ಹಾಗೂ ಒಬ್ಬರಿಗೆ ತೀವ್ರ ಗಾಯವಾಗಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ದತ್ತಾತ್ರೇಯ ಗಾದಾ ಅವರು ದೇವಸ್ಥಾನ ಸಮಿತಿಯ ಅಧ್ಯಕ್ಷ ಅನಿಲಕುಮಾರ ರಗಟೆ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ.

‘ಬರೀ ಏಪ್ರಿಲ್ 22 ರವರೆಗೆ ಮಾತ್ರ ಜಾತ್ರೆಗಾಗಿ ಅನುಮತಿ ಪಡೆದು ನಿಯಮವನ್ನು ಉಲ್ಲಂಘಿಸಿ ಏಪ್ರಿಲ್ 23 ರವರೆಗೆ ಕಾರ್ಯಕ್ರಮ ಏಕೆ ಮುಂದುವರೆಸಲಾಯಿತು. ರಥೋತ್ಸವದ ಸಂದರ್ಭದಲ್ಲಿ ನಡೆದ ಅವಘಡದಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಅನುಮತಿಯ ಷರತ್ತು ಉಲ್ಲಂಘನೆ ಆಗಿದೆ. ಆದ್ದರಿಂದ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಇದಲ್ಲದೆ ಗಾಯಾಳುಗಳಿಗೆ ನೀಡಿದ ಪರಿಹಾರದ ಬಗ್ಗೆಯೂ ತಿಳಿಸಬೇಕು’ ಎಂದು ಸೂಚಿಸಲಾಗಿದೆ.

‘ಜಾತ್ರೆಯಲ್ಲಿ ಭದ್ರತಾ ಕ್ರಮ ಅನುಸರಿಸಿಲ್ಲ, ತುರ್ತು ಪರಿಸ್ಥಿತಿ ನಿರ್ವಹಣೆ ಕೊರತೆ ಎದ್ದು ಕಾಣುತ್ತಿದೆ. ಆದ್ದರಿಂದ 24 ಗಂಟೆಗಳಲ್ಲಿ ಈ ಬಗ್ಗೆ ಉತ್ತರ ನೀಡದೆ ಇದ್ದಲ್ಲಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಲಾಗಿದೆ.

ಕಾರ್ಯಕ್ರಮದ ಪೊಲೀಸ್ ಬಂದೋಬಸ್ತ್ ಬಗ್ಗೆಯೂ ಮಾಹಿತಿ ಕೇಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-33-1368227535

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.