ಭಾಲ್ಕಿ: ‘ಶರಣರ ನಡೆದಾಡಿದ ಭೂಮಿ ಬಸವಕಲ್ಯಾಣದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ಅನುಭವ ಮಂಟಪ ಕಟ್ಟಡ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ₹50 ಕೋಟಿ ಬಿಡುಗಡೆ ಮಾಡಿರುವುದು ಸಂತಸ ತರಿಸಿದೆ’ ಎಂದು ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಂತಸ ವ್ಯಕ್ತಪಡಿಸಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರ 1.0 ಸರ್ಕಾರದಲ್ಲಿ ಉಸ್ತುವಾರಿ ಸಚಿವರಿದ್ದ ಸಂದರ್ಭದಲ್ಲಿ ಅನುಭವ ಮಂಟಪ ಕಟ್ಟಡ ನಿರ್ಮಾಣದ ನೀಲನಕ್ಷೆ ಸಿದ್ಧಪಡಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯನವರ 2.0 ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಈಶ್ವರ ಖಂಡ್ರೆ ಅವರು ಮುಂದುವರೆದು ಅನುಭವ ಮಂಟಪಕ್ಕೆ ಅನುದಾನದ ಕೊರತೆ ಆಗದಂತೆ ನೋಡಿಕೊಂಡಿದ್ದಾರೆ. ಅದರಂತೆ ಇದೀಗ ಖಂಡ್ರೆ ಅವರು ಸಿಎಂ ಅವರ ಮನವೊಲಿಸಿ ಹೆಚ್ಚುವರಿಯಾಗಿ ಅನುಭವ ಮಂಟಪಕ್ಕೆ ₹50 ಕೋಟಿ ಬಿಡುಗಡೆ ಮಾಡಿಸಿರುವುದು ಹರ್ಷದ ಸಂಗತಿ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-33-483846800

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.