ಬಸವಕಲ್ಯಾಣ: ನಗರದಲ್ಲಿನ 108 ಅಡಿ ಎತ್ತರದ ಬಸವಣ್ಣನವರ ಮೂರ್ತಿಯ ಎದುರು ಈಚೆಗೆ ಬಿಜೆಪಿ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೀತೆ ಹಾಡಿರುವುದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅನೇಕರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಹಲವರು ಈ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಮೇ 16 ಹಾಗೂ 17ರಂದು ನಡೆದ ಎರಡು ದಿನಗಳ ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನ, ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗದಲ್ಲಿ ಪಾಲ್ಗೊಂಡಿದ್ದವರು. ಮೂರ್ತಿ ಎದುರಲ್ಲಿ ಆರ್ಎಸ್ಎಸ್ ಗೀತೆ ಹಾಡಿದ್ದಾರೆ. ಜಿಲ್ಲೆಯ ನಾಲ್ವರು ಶಾಸಕರು ಒಳಗೊಂಡು ವಿಧಾನಪರಿಷತ್ ಸದಸ್ಯರು, ಬಿಜೆಪಿ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಶಿಕ್ಷಣ ಅಭಿಯಾನಕ್ಕಾಗಿ ಬಸವ ಮಮಹಾಮನೆ ಪಕ್ಕದ ಸಭಾ ಮಂಟಪ ಬಾಡಿಗೆಗೆ ಪಡೆಯಲಾಗಿತ್ತು. ಬೆಳಿಗ್ಗೆಯಿಂದ ಸಂಜೆಯವರೆಗೆ ಇಲ್ಲಿಯೇ ಎಲ್ಲ ಕಾರ್ಯಚಟುವಟಿಕೆಗಳು ನಡೆದವು. ಹೀಗಿದ್ದಾಗ ಅಸಮಾನತೆ ಹಾಗೂ ವೈದಿಕ ಧರ್ಮದ ಮಹತ್ವ ಸಾರುವ ಗೀತೆ ಹಾಡುವುದಕ್ಕೆ ಮೂರ್ತಿ ಎದುರಿನ ಸ್ಥಳ ಏಕೆ ಆಯ್ಕೆ ಮಾಡಿಕೊಳ್ಳಲಾಯಿತು. ಇದರ ಹಿಂದೆ ಏನಾದರೂ ಕುತಂತ್ರವಿದೆಯೇ? ವಿವಾದ ಸೃಷ್ಟಿಸುವ ಹುನ್ನಾರ ನಡೆದಿದೆಯೇ ಎಂದು ಹಲವರು ಪ್ರಶ್ನಿಸಿದ್ದಾರೆ.

‘ಸಭಾ ಮಂಟಪವನ್ನು ಮದುವೆ ಇತ್ಯಾದಿ ಕಾರ್ಯಕ್ರಮಗಳಿಗಾಗಿ ಯಾವುದೇ ಜಾತಿ, ಧರ್ಮ, ಪಕ್ಷ ನೋಡದೆ ದೇಣಿಗೆ ಪಡೆದು ಒದಗಿಸಲಾಗುತ್ತದೆ. ಅದರಂತೆ ಪ್ರಶಿಕ್ಷಣ ವರ್ಗಕ್ಕಾಗಿಯೂ ನೀಡಿದ್ದೇವು’ ಎಂದು ಬಸವ ಮಹಾಮನೆಯ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

‘ವಿವಿಧ ಚಟುವಟಿಕೆಗಳ ಮೂಲಕ ಬಸವತತ್ವವನ್ನು ಅವಮಾನಿಸುತ್ತಿರುವ ಇಂಥ ಜಾತಿವಾದಿಗಳಿಗೆ ಧಿಕ್ಕರಿಸ ಬೇಕಾಗಿದೆ’ ಎಂದು ಹುಲಸೂರ ಬಸವಕೇಂದ್ರದ ಅಧ್ಯಕ್ಷ ಆಕಾಶ ಖಂಡಾಳೆ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-33-1213841704

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.