ಸೋಮವಾರ, ಅಕ್ಟೋಬರ್ 26, 2020
28 °C

ಶಾಸಕ ಬಿ. ನಾರಾಯಣರಾವ್‌ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಶಾಸಕ ಬಿ.ನಾರಾಯಣರಾವ್‌ ಪಾರ್ಥಿವ ಶರೀರ ಬಸವಕಲ್ಯಾಣಕ್ಕೆ ಬಂದಿದೆ. ಮುಡಬಿ ಕ್ರಾಸ್‌ನಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಜಾಗೃತಿ ಆಶ್ರಮ ಸಮೀಪದ ಅಟೋನಗರದಲ್ಲಿ ಶಾಸಕ ಬಿ.ನಾರಾಯಣರಾವ್ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ.

ನಾರಾಯಣರಾವ್‌ ಪತ್ನಿ ಮಲ್ಲಮ್ಮ, ಪುತ‌್ರರಾದ ಗೌತಮ, ರಾಹುಲ್, ಜಿಲ್ಲಾಧಿಕಾರಿ ರಾಮಚಂದ್ರನ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ, ಬಸವಕಲ್ಯಾಣ ತಹಶೀಲ್ದಾರ್ ಸಾವಿತ್ರಿ ಸಲಗರ ಸ್ಥಳದಲ್ಲಿದ್ದಾರೆ. ಅಂತ್ಯಸಂಸ್ಕಾರ ನಡೆಯುವ ಸ್ಥಳದ ಸಮೀಪ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದು, ಪೊಲೀಸ್ ಬಿಗಿ ಬಂದೋಬಸ್ತ ಮಾಡಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ಬಂಡೆಪ್ಪ ಕಾಶೆಂಪುರ, ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಡಾ.ಚಂದ್ರಶೇಖರ ಪಾಟೀಲ, ಕಲಬುರ್ಗಿ ಸಂಸದ ಡಾ.ಉಮೇಶ ಜಾಧವ, ಮಾಜಿ ಶಾಸಕ‌ ಮಲ್ಲಿಕಾರ್ಜುನ ಖೂಬಾ, ಹಾರಕೂಡ ಚನ್ನವೀರ ಶಿವಾಚಾರ್ಯರು ಹಾಜರಿದ್ದಾರೆ.   

ಹೈದರಾಬಾದ್‌–ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಲ್ಲಲ್ಲಿ ಗುಂಪುಗುಂಪಾಗಿ ಸಾವಿರಾರು ಜನರು ನೆರೆದಿದ್ದಾರೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು