ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣದಲ್ಲಿ ಬಿ.ನಾರಾಯಣರಾವ್‌ ಅಂತ್ಯಕ್ರಿಯೆ

Last Updated 25 ಸೆಪ್ಟೆಂಬರ್ 2020, 8:48 IST
ಅಕ್ಷರ ಗಾತ್ರ

ಬೀದರ್‌: ಕೋವಿಡ್‌ನಿಂದ ನಿಧನರಾದ ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ.ನಾರಾಯಣರಾವ್‌ ಅವರ ಅಂತ್ಯಕ್ರಿಯೆ
ಬಸವಕಲ್ಯಾಣದ ಹೊರವಲಯದಲ್ಲಿರುವ ಮುಡಬಿ ಕ್ರಾಸ್‌ ಬಳಿಯ ಅಟೋನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆಯಿತು.

ಪಿಪಿಇ ಕಿಟ್‌ ಧರಿಸಿದ್ದ ವೈದ್ಯಕೀಯ ಸಿಬ್ಬಂದಿ ನಾರಾಯಣರಾವ್‌ ಅವರ ಪಾರ್ಥಿವ ಶರೀರವನ್ನು ಅಂತ್ಯಸಂಸ್ಕಾರದ ಸ್ಥಳಕ್ಕೆ ತರುತ್ತಿದ್ದಂತೆಯೇ ಕುಟುಂಬದ ಸದಸ್ಯರ ಅಕ್ರಂದನ ಮುಗಿಲು ಮುಟ್ಟಿತ್ತು. ನಾರಾಯಣರಾವ್‌ ಪತ್ನಿ ಮಲ್ಲಮ್ಮ, ಪುತ‌್ರರಾದ ಗೌತಮ, ರಾಹುಲ್ ಅವರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ಬಂಡೆಪ್ಪ ಕಾಶೆಂಪುರ, ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಡಾ.ಚಂದ್ರಶೇಖರ ಪಾಟೀಲ, ಕಲಬುರ್ಗಿ ಸಂಸದ ಡಾ.ಉಮೇಶ ಜಾಧವ, ಮಾಜಿ ಶಾಸಕ‌ ಮಲ್ಲಿಕಾರ್ಜುನ ಖೂಬಾ, ಹಾರಕೂಡ ಚನ್ನವೀರ ಶಿವಾಚಾರ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ರಾಮಚಂದ್ರನ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ, ಬಸವಕಲ್ಯಾಣ ತಹಶೀಲ್ದಾರ್ ಸಾವಿತ್ರಿ ಸಲಗರ ಸ್ಥಳದಲ್ಲೇ ಇದ್ದು ಸಕಲ ವ್ಯವಸ್ಥೆ ಮಾಡಿದರು.

ಹೈದರಾಬಾದ್‌–ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಲ್ಲಲ್ಲಿ ಗುಂಪುಗುಂಪಾಗಿ ಸಾವಿರಾರು ಜನರು ಸೇರಿದ್ದರು. ಕೋವಿಡ್‌ ನಿಯಮಾವಳಿಯಿಂದಾಗಿ ಅಭಿಮಾನಿಗಳಿಗೆ ನಾರಾಯಣರಾವ್‌ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT