ಭಾನುವಾರ, ಸೆಪ್ಟೆಂಬರ್ 20, 2020
22 °C

ಕೋವಿಡ್–19: ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಮಣಿಪಾಲ್ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ತಮಗೆ ಕೊರೊನಾ ಸೋಂಕು ತಗುಲಿರುವ ಕಾರಣ ಕ್ಷೇತ್ರದ ಜನ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ತಿಳಿಸಿದ್ದಾರೆ.

ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಆರೋಗ್ಯವಾಗಿ ಇದ್ದೇನೆ ಎಂದು ಹೇಳಿದ್ದಾರೆ.
ಕೊರೊನಾ ಸಂಕಟದ ಸಂದರ್ಭದಲ್ಲಿ ನಿರಂತರ ಜನ ಸೇವೆಯಲ್ಲಿ ತೊಡಗಿಸಿಕೊಂಡಿದ್ದೆ. ಕ್ಷೇತ್ರ ವ್ಯಾಪ್ತಿಯ ಗ್ರಾಮಗಳು ಹಾಗೂ ಬೆಂಗಳೂರಿಗೆ ಹಲವು ಬಾರಿ ಭೇಟಿ ನೀಡಿದ್ದೆ. ಈ ವೇಳೆ ನನ್ನ ಅರಿವಿಗೆ ಬಾರದಂತೆ ಸೋಂಕು ತಗುಲಿದೆ ಎಂದು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಇದ್ದರೂ ಕ್ಷೇತ್ರದ ಕೊರೊನಾ ಬೆಳವಣಿಗೆಗಳ ಮೇಲೆ ನಿರಂತರ ನಿಗಾ ಇರಿಸಿದ್ದೇನೆ. ಕ್ಷೇತ್ರದ ಜನರ ಕೆಲಸ ಕಾರ್ಯಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಆಪ್ತ ಸಹಾಯಕರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಕ್ಷೇತ್ರದ ಜನ ತುರ್ತು ಕೆಲಸ ಕಾರ್ಯಗಳಿದ್ದಲ್ಲಿ ತಮ್ಮ ಆಪ್ತ ಸಹಾಯಕರಾದ ಪಂಕಜ್ ಸೂರ್ಯವಂಶಿ ಹಾಗೂ ಮೊಯಿಜ್ ಖಾನ್ ಬೆಂಗಳೂರು ಅವರನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು