ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಣ್ಣ ಜಗತ್ತಿನ ಶ್ರೇಷ್ಠ ದಾರ್ಶನಿಕ:

Last Updated 27 ಏಪ್ರಿಲ್ 2020, 15:21 IST
ಅಕ್ಷರ ಗಾತ್ರ

ಬೀದರ್‌: ‘ಬಸವಣ್ಣ ಜಗತ್ತಿನ ಶ್ರೇಷ್ಠ ದಾರ್ಶನಿಕ. ಸಮಾಜದಲ್ಲಿನ ಎಲ್ಲ ಅಸಮಾನತೆಗಳನ್ನು ತೊಡೆದು ಹಾಕಿದ ಕೀರ್ತಿ ಅವರಿಗೆ ಸಲ್ಲುತ್ತದೆ’ ಎಂದು ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ ಹೇಳಿದರು.

ಇಲ್ಲಿಯ ಬಸವ ಕೇಂದ್ರದಲ್ಲಿ ಭಾನುವಾರ ಆಯೋಜಿಸಿದ್ದ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಬಡವರಿಗೆ ಆಹಾರಧಾನ್ಯಗಳ ಕಿಟ್ ವಿತರಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಬಸವಕೇಂದ್ರ ಟ್ರಸ್ಟ್ ಅಧ್ಯಕ್ಷ ಪ್ರಭುರಾವ್ ವಸಮತೆ ಮಾತನಾಡಿ, ‘ಡಾ.ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ಕಾರ್ಯ ಶ್ಲಾಘನೀಯವಾಗಿದೆ. ಸಂಕಷ್ಟದ ಸಂದರ್ಭದಲ್ಲಿ ಬಡವರಿಗೆ ನೆರವಾಗುತ್ತಿರುವುದು ಅಭಿನಂದನೀಯ’ ಎಂದರು.

ಬಸವ ಕೇಂದ್ರದ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾವತಿ ಬಲ್ಲೂರ ನೇತೃತ್ವದಲ್ಲಿ ತೊಟ್ಟಿಲು ಕಾರ್ಯಕ್ರಮ ಜರುಗಿತು. ನೂರಾರು ಜನರಿಗೆ ಮಾಸ್ಕ್, ಆಹಾರ ಕಿಟ್ ಜತೆಗೆ ಗ್ರಂಥಾರ್ಪಣೆ ಮಾಡಲಾಯಿತು

ನಗರಸಭೆ ಸದಸ್ಯೆ ಶಕುಂತಲಾ ಮಲ್ಕಪ್ಪ , ಕಸ್ತೂರಿಬಾಯಿ ಬಿರಾದಾರ ಶೀಲಾವತಿ ಶೀಲವಂತ, ರಾಜಮ್ಮ ಚಿಕ್ಕಪೇಟ ರಜಿಯಾ ಬಳಬಟ್ಟಿ, ಸಕಲೇಶ್ವರಿ ಚನ್ನಶೆಟ್ಡಿ ಸೌಭಾಗ್ಯವತಿ ಬಿರಾದಾರ ಇದ್ದರು.
ಯುವ ಬಸವ ಕೇಂದ್ರ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಸ್ವಾಗತಿಸಿದರು. ಸಿದ್ಧಾರೂಢ ಭಾಲ್ಕೆ ನಿರೂಪಿಸಿದರು. ಶರಣಯ್ಯ ಸ್ವಾಮಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT