ಬೀದರ್: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಭರಶೆಟ್ಟಿ (68) ಮಂಗಳವಾರ ನಿಧನರಾದರು.
ಅವರಿಗೆ ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಹೊರವಲಯದ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಭರಶೆಟ್ಟಿ ಅವರು ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನಾಲ್ಕು ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬಸವ ಕೇಂದ್ರದ ಅಧ್ಯಕ್ಷರಾಗಿ, ರಾಷ್ಟ್ರೀಯ ಬಸವ ದಳದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ. ಜ್ಞಾನ ಕಾರಂಜಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಗ್ರಾಮೀಣ ಭಾಗದಲ್ಲಿ ೫೦ ನೈಟಿಂಗೆಲ್ ಕನ್ನಡ ಶಾಲೆ ತೆರೆದಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.