ಶುಕ್ರವಾರ, ಅಕ್ಟೋಬರ್ 7, 2022
24 °C

ಬಸವೇಶ್ವರ ಮೂರ್ತಿ ಕೊಡುಗೆ: ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಚಿಟಗುಪ್ಪ ತಾಲ್ಲೂಕಿನ ಮಾಡಗೂಳ ಗ್ರಾಮದ ಬಸವೇಶ್ವರ ಕಲ್ಯಾಣ ಮಂಟಪಕ್ಕೆ ಬಸವೇಶ್ವರ ಮೂರ್ತಿ ಕೊಡುಗೆಯಾಗಿ ನೀಡಲಾಗುವುದು ಎಂದು ಶಾಸಕ ರಾಜಶೇಖರ ಪಾಟೀಲ ಭರವಸೆ ನೀಡಿದರು.
ಗ್ರಾಮದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ವೀರಶೈವ ಲಿಂಗಾಯತ ಮಹಾ ವೇದಿಕೆ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ವೇದಿಕೆಯ ಚಿಟಗುಪ್ಪ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ ಬಾವಗಿ, ಯುವ ಘಟಕದ ಮಾಡಗೂಳ ಗ್ರಾಮ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ, ಉಪಾಧ್ಯಕ್ಷ ಮಡಿವಾಳ ದೇವಣಿ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಗಣ್ಯರು ಇದ್ದರು.
ಪ್ರತಿ ಗ್ರಾಮಗಳಲ್ಲಿ ಮೂರ್ತಿ: ವೀರಶೈವ ಲಿಂಗಾಯತ ಮಹಾ ವೇದಿಕೆಯು ಬರುವ ದಿನಗಳಲ್ಲಿ ಜಿಲ್ಲೆಯ ಪ್ರತಿ ಗ್ರಾಮಗಳಲ್ಲೂ ಬಸವೇಶ್ವರ ಮೂರ್ತಿ ಸ್ಥಾಪನೆಗೆ ಶ್ರಮಿಸಲಿದೆ ಎಂದು ವೀರಶೈವ ಲಿಂಗಾಯತ ಮಹಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅಂಬರೀಷ್ ಬಟನಾಪುರೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.