ಚಿಟಗುಪ್ಪ (ಹುಮನಾಬಾದ್): ತಾಲ್ಲೂಕಿನ ಮೀನಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸೀರಾಪುರ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡು ನೀರಿಗಾಗಿ ಹಾಹಾಕಾರ ಉಂಟಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದಲೂ ನೀರಿನ ಸಮಸ್ಯೆ ಹೆಚ್ಚಾಗಿದೆ.

ಆದರೆ ಇಲ್ಲಿನ ಸಾರ್ವಜನಿಕರ ಗೋಳು ಕೇಳುವವರು ಯಾರು ಇಲ್ಲದಂತಾಗಿ. ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವಂತೆ ಹೇಳಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬಸೀರಾಪುರ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿ ನೀರಿಗಾಗಿ ಪ್ರತಿ ನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ ಎನ್ನುವುದು ಸಾರ್ವಜನಿಕರು ಆರೋಪಿಸಿದ್ದಾರೆ.

ಪ್ರತಿಭಟನೆ: ಬಸೀರಾಪುರ ಗ್ರಾಮದಲ್ಲಿ ನೀರಿನ ಸಮಸ್ಯೆಯಿಂದ ಬೇಸತ್ತಿದ್ದ ಗ್ರಾಮಸ್ಥರು ಮೀನಕೇರಾ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ತಕ್ಷಣ ನೀರಿನ ವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿದರು.

ಪ್ರತಿಭಟನಾ ವಿಷಯ ತಿಳಿದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀ ಬಿರಾದಾರ್, ಆಡಳಿತಾಧಿಕಾರಿ ತಹಶೀಲ್ದಾರ್ ಮಂಜುನಾಥ್ ಪಂಚಾಳ್, ಪಿಡಿಒ ಪ್ರವೀಣಕುಮಾರ್ ಮಠಪತಿ ಭೇಟಿ ನೀಡಿ ಸಮಸ್ಯೆ ಆಲಿಸಿ ಪ್ರತಿಭಟನಕಾರಿಗೆ ಸಮಾಧಾನ ಪಡಿಸಿದರು.

ನಂತರ ಪಿಡಿಒ ಪ್ರವೀಣ್ ಕುಮಾರ್ ಮಾತನಾಡಿ, ‘ಬೇಸಿಗೆಯ ಬಿಸಿಲಿನ ಪ್ರಖರತೆ ಹೆಚ್ಚಾದ ಕಾರಣ ಬಸೀರಾಪುರ ಗ್ರಾಮದಲ್ಲಿನ ಕೊಳವೆ ಬಾವಿಗಳು ಬತ್ತಿವೆ. ಎರಡು ಕೊಳವೆ ಬಾವಿಗಳಲ್ಲಿ ನೀರು ಇದ್ದು, ಅವು ಸಹ ಕೆಟ್ಟಿದ್ದ ಕಾರಣ ಎರಡು ದಿನಗಳ ಕಾಲ ನೀರಿನ ಸಮಸ್ಯೆ ಆಗಿದೆ. ಇಂದೆ ಮೋಟಾರು ರಿಪೇರಿ ಮಾಡಿಸಿ ಸಮಸ್ಯೆ ಬಗೆಹರಿಸಲಾಗುವುದು ಭರವಸೆ ನೀಡಿದರು.

ಸರ್ಕಾರದಿಂದ ಕುಡಿಯುವ ನೀರಿಗಾಗಿ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ. ಶಾಸಕರು ತಮ್ಮ ನಿಧಿಯಿಂದ ಸ್ವಲ್ಪ ಹಣ ನೀಡುವುದಾಗಿ ಭರವಸೆ ನೀಡಿದ್ದಾರೆ. ಸಾರ್ವಜನಿಕರು ಸರಿಯಾಗಿ ತೆರಿಗೆ ಪಾವತಿಸದಿರುವುದೂ ಪಂಚಾಯಿತಿಗೆ ಆರ್ಥಿಕ ಸಂಕಷ್ಟಕ್ಕೆಕಾರಣವಾಗಿದೆ. ಹೀಗಾಗಿ ಸಾರ್ವಜನಿಕರು ಸಹ ನಿಯಮಿತವಾಗಿ ತೆರಿಗೆ ಪಾವತಿಸಬೇಕೆಂದು ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-33-1129273843

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.