ಗುರುವಾರ , ಮೇ 13, 2021
38 °C

ಬೀದರ್: ಬಾವಗಿಯಲ್ಲಿ ಸ್ವಯಂಪ್ರೇರಿತ ಲಾಕ್‍ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ (ಬೀದರ್‌ ಜಿಲ್ಲೆ): ಕೋವಿಡ್ ಹೆಚ್ಚುತ್ತಿರುವ ಕಾರಣ ಬೀದರ್ ತಾಲ್ಲೂಕಿನ ಬಾವಗಿ ಗ್ರಾಮಸ್ಥರು ಸ್ವಯಂ ಪ್ರೇರಿತ ಲಾಕ್‍ಡೌನ್ ವಿಧಿಸಿಕೊಂಡಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರಾದ ಶಾಂತವೀರ ಹಜ್ಜರಗಿ, ತಾಜೊದ್ದಿನ್ ಹಾಗೂ ಗುರು ಭದ್ರೇಶ್ವರ ಸಂಸ್ಥಾನ ಮಠದ ಶಿವಕುಮಾರ ಸ್ವಾಮಿ ಮೊದಲಾದವರ ಜಾಗೃತಿ ಪರಿಣಾಮ ಸದ್ಯ ಗ್ರಾಮದಲ್ಲಿ ಕಿರಾಣಿ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಅಂಗಡಿಗಳು ಬಂದ್ ಆಗಿವೆ.

‘ಕಿರಾಣಿ ಅಂಗಡಿಗಳು ಬೆಳಿಗ್ಗೆ 6 ರಿಂದ 8 ಹಾಗೂ ಸಂಜೆ 6ರಿಂದ 8 ಗಂಟೆ ವರೆಗೆ ಮಾತ್ರ ತೆರೆದಿರುತ್ತವೆ. ಕೋವಿಡ್ ಸೋಂಕಿನಿಂದಾಗಿ ಜನಸಂದಣಿಯಿಂದ ಆದಷ್ಟು ದೂರ ಇರುವುದು ಒಳ್ಳೆಯದು. ಪಂಚಾಯಿತಿ ಸದಸ್ಯರು ಹಾಗೂ ಗ್ರಾಮದ ಪ್ರಮುಖರ ಮನವೊಲಿಕೆ ಕಾರಣ ವ್ಯಾಪಾರಿಗಳು ಹೋಟೆಲ್‌ ಮತ್ತು ಅಂಗಡಿಗಳನ್ನು ಮುಚ್ಚಿಟ್ಟಿದ್ದಾರೆ. ಜನ ಗುಂಪು ಗುಂಪಾಗಿ ಓಡಾಡುವುದನ್ನು ಕಡಿಮೆ ಮಾಡಿದ್ದಾರೆ’ ಎಂದು ಶಿವಕುಮಾರ ಸ್ವಾಮಿ ತಿಳಿಸಿದರು.

‘ಕೋವಿಡ್ ಸಾವು ನೋವುಗಳಿಗೆ ಕಾರಣವಾಗಿದೆ. ಗ್ರಾಮದಲ್ಲಿ ಯಾರಿಗೂ ಸಮಸ್ಯೆ ಆಗಬಾರದು ಎನ್ನುವುದೇ ಸ್ವಯಂ ಪ್ರೇರಿತ ಲಾಕ್‍ಡೌನ್ ಉದ್ದೇಶವಾಗಿದೆ’ ಎಂದು ಹೇಳಿದರು.

ಬಾವಗಿ ಗ್ರಾಮದಲ್ಲಿ 600 ಮನೆಗಳಿದ್ದು, 2400 ಜನಸಂಖ್ಯೆ ಇದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು