ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸಿ: ಹುಮನಾಬಾದ್ ತಾಲ್ಲೂಕು ಆರೋಗ್ಯಾಧಿಕಾರಿ ಸಲಹೆ

Last Updated 15 ಜುಲೈ 2021, 3:40 IST
ಅಕ್ಷರ ಗಾತ್ರ

ಹುಮನಾಬಾದ್: ‘ರೋಗ ಬಂದ ನಂತರ ಚಿಕಿತ್ಸೆ ಪಡೆದುಕೊಳ್ಳುವ ಬದಲು ರೋಗ ಬರದಂತೆ ತಡೆಯುವುದು ಒಳ್ಳೆಯದು. ಹೀಗಾಗಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣಕಾಗಿ ಆದ್ಯತೆ ನೀಡಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶಿವಕುಮಾರ್ ಸಿದ್ದೇಶ್ವರ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ನಡೆದ ಡೆಂಗಿ ಮಾಸಾಚರಣೆ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಡೆಂಗಿ, ಮಲೇರಿಯಾ, ಚಕೂನ್‌ಗುನ್ಯಾ, ವಾಂತಿಭೇದಿ ರೋಗಗಳನ್ನು ತಡೆಗಟ್ಟಲು ಗ್ರಾಮ ಪಂಚಾಯಿತಿ ಅಧಿಕಾರಿಗಳ ಜವಾಬ್ದಾರಿ ಅತಿ ಮುಖ್ಯವಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ತಗ್ಗು ಗುಂಡಿಗಳಲ್ಲಿ ಹಾಗೂ ಚರಂಡಿಗಳಲ್ಲಿ ಕೊಳಚೆ ನೀರು ನಿರಂತರವಾಗಿ ಸಂಗ್ರಹಗೊಂಡರೆ ಸೊಳ್ಳೆಗಳ ಕಾಟ ಹೆಚ್ಚಾಗುತ್ತದೆ. ಅವುಗಳ ಸ್ವಚ್ಛತೆಗೆ ಕಾಳಜಿ ವಹಿಸುವುದು ಅಗತ್ಯ’ ಎಂದು ಸಲಹೆ ಮಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗೋವಿಂದ್ ಮಾತನಾಡಿ, ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಬೇಕಾದ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಇದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಜುಲೈ 22ರಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಯನ್ನು ಹಮ್ಮಿಕೊಳ್ಳಲಾಗಿದೆ. ಫಲಾನುಭವಿಗಳು ಭಾಗವಹಿಸುವಂತೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT