ಕೋವಿಡ್ ಮೂರನೇ ಅಲೆ ಮೊದಲೇ ಎಚ್ಚರ ವಹಿಸಿ: ಸಚಿವ ಕೆ.ಎಸ್.ಈಶ್ವರಪ್ಪ

ಬೀದರ್: ‘ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಸೋಂಕು ತಗಲುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸೋಂಕು ಬರುವ ಮೊದಲೇ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದ ಜನರಿಗೆ ಲಸಿಕೆ ಕೊಡುವ ಕಾರ್ಯವನ್ನು ತೀವ್ರಗೊಳಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ ನೀಡಿದರು.
ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
‘ಹೆಣ್ಣು ಮಕ್ಕಳಿಗೆ ವಿಶೇಷವಾಗಿ ತಾಯಂದಿರಿಗೆ ಮೊದಲು ಕೋವಿಡ್ ಲಸಿಕೆ ಕೊಡಬೇಕು. ಮಗುವಿಗೆ ಸೋಂಕು ಬಂದರೆ ತಾಯಿಗೂ ಹರಡುವ ಸಾಧ್ಯತೆ ಇರುತ್ತದೆ. ಆದ್ಯತೆಯ ಮೇಲೆ ಲಸಿಕೆ ಹಾಕುವ ಕೆಲಸ ಮಾಡಬೇಕು’ ಎಂದು ನಿರ್ದೇಶನ ನೀಡಿದರು.
‘ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸಿದ ಕಾರಣ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲು ಅನುಕೂಲವಾಗಿದೆ. ಲಸಿಕೆಗಳನ್ನು ಸಹ ಕೊಡಲಾಗುತ್ತಿದ್ದು, ಉತ್ತಮ ಪ್ರಗತಿ ಸಾಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದರು.
ಜಿಲ್ಲೆಯಲ್ಲಿ ಈಗಲೂ 9 ಕೋವಿಡ್ ಕೇಂದ್ರಗಳು ಇವೆ. ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್ ತೆರೆದು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ಸಕ್ರಿಯ ಪ್ರಕರಣ 0.11ಕ್ಕೆ ಇಳಿದಿದೆ. ರಿಕವರಿ ರೇಟ್ 98.24 ಇದೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.