ಶನಿವಾರ, ಅಕ್ಟೋಬರ್ 1, 2022
23 °C

ಜಂಗಮರ ಸತ್ಯಾಗ್ರಹ; ಮತ್ತೊಬ್ಬರು ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾಲ್ಕಿ: ಇಲ್ಲಿಯ ತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಬೇಡ ಜಂಗಮ ಸಮಾಜದಿಂದ ನಡೆಯುತ್ತಿರುವ ಸತ್ಯ ಪ್ರತಿಪಾದನಾ ಸತ್ಯಾಗ್ರಹ 36ನೇ ದಿನಕ್ಕೆ ಕಾಲಿಟ್ಟಿದ್ದು, ಪಟ್ಟಣದ ನಿವಾಸಿ ಧೂಳಯ್ಯ ಚನ್ನಯ್ಯ ಸ್ವಾಮಿ ಬುಧವಾರ ಬೆಳಿಗ್ಗೆ ಅಸ್ವಸ್ಥಗೊಂಡರು.

ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮುಂಚೆ ಚಳಕಾಪುರದ ರಾಚಯ್ಯಾ ಸ್ವಾಮಿ ಅಸ್ವಸ್ಥರಾಗಿದ್ದರು. ಇಷ್ಟು ದಿನದಿಂದ ಸತ್ಯಾಗ್ರಹ ನಡೆಸುತ್ತಿದ್ದರೂ ಯಾವೊಬ್ಬ ರಾಜಕಾರಣಿಯೂ ಭೇಟಿ ಮಾಡಿ ಚರ್ಚಿಸಿಲ್ಲ ಎಂದು ಹೋರಾಟಗಾರರು ಆರೋಪಿಸಿದರು.

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು ಎಂದು ಪ್ರಮುಖರಾದ ಮಲ್ಲಿಕಾರ್ಜುನ ಸ್ವಾಮಿ, ಮನ್ಮಥ ಸ್ವಾಮಿ ಸೇರಿದಂತೆ ಇತರರು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು