ಸೋಮವಾರ, ಜುಲೈ 26, 2021
21 °C

‘ಅನುಮತಿ ಪಡೆದು ದಾಖಲಿಸಿಕೊಳ್ಳಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾಲ್ಕಿ: 2020-21 ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ಅನುಮತಿಗಾಗಿ ಪ್ರಸ್ತಾವ ಸಲ್ಲಿಸಿರುವ ಸಂಸ್ಥೆಯ ಆಡಳಿತ ಮಂಡಳಿಯವರು ನಿಯಮನುಸಾರ ಇಲಾಖೆಯಿಂದ ಅಧಿಕೃತವಾಗಿ ಮಾನ್ಯತೆ ಪಡೆದ ನಂತರವೇ ದಾಖಲಾತಿ ಮಾಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದನೂರ್ ಸೂಚನೆ ನೀಡಿದ್ದಾರೆ.

ಅನುಮತಿ ಪಡಿಯದೇ ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ದಾಖಲಾತಿ ಹಾಗೂ ಶಾಲೆಗಳನ್ನು ಪ್ರಾರಂಭಿಸುವಂತಿಲ್ಲ. ಸಾರ್ವಜನಿಕರು, ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಾತಿ, ಮಾಡಿಕೊಳ್ಳುವ ಪೂರ್ವದಲ್ಲಿ ಶಾಲೆ ಅಧಿಕೃತವಾಗಿ ಮಾನ್ಯತೆ ಪಡೆದಿದೆಯೇ ಎನ್ನುವುದು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.