ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಬೇಟಿ ಬಚಾವೋ ಬೇಟಿ ಪಡಾವೋ‘ ಅನುಷ್ಠಾನಕ್ಕೆ ಬರಲಿ

Published 26 ಜನವರಿ 2024, 7:27 IST
Last Updated 26 ಜನವರಿ 2024, 7:27 IST
ಅಕ್ಷರ ಗಾತ್ರ

ಬೀದರ್‌:  ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ನಗರದಲ್ಲಿ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಏರ್ಪಡಿಸಿದ್ದ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ ಹಸಿರು ನಿಶಾನೆ ತೋರಿದರು.

ಬಳಿಕ ನಗರದ ಬಾಲ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ  ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಕೆ ಕನಕಟ್ಟೆ, ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿದಿರುವುದು ಕಳವಳಕಾರಿ ಸಂಗತಿ. ‘ಬೇಟಿ ಬಚಾವೋ ಬೇಟಿ ಪಡಾವೋ‘ ಅನುಷ್ಠಾನಕ್ಕೆ ಬರಬೇಕಿದೆ ಎಂದರು.

ಡಾ. ಗಿರೀಶ ಬದೋಲೆ ಮಾತನಾಡಿ, ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಹೇಳಬೇಕು. ಅವರಿಗಿರುವ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.

ಆಹಾರ ನಾಗರಿಕ ಮತ್ತು ಸರಬರಾಜು ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸುರೇಖಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ  ಸುರೇಖಾ ಮನ್ನೊಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಗುರುರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಸ್ತಿರೋಗ ತಜ್ಞೆ ಡಾ. ಆರತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ದಿಲೀಪ ಡೋಂಗ್ರೆ, ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪರತಾಪೂರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT