ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ ಲೋಕಸಭಾ ಕ್ಷೇತ್ರ: ಭಗವಂತ ಖೂಬಾ ನಾಮಪತ್ರ ಸಲ್ಲಿಕೆ

ಮೂರನೇ ದಿನ ಎರಡು ನಾಮಪತ್ರ ಸಲ್ಲಿಕೆ
Last Updated 30 ಮಾರ್ಚ್ 2019, 12:38 IST
ಅಕ್ಷರ ಗಾತ್ರ

ಬೀದರ್‌: ಬೀದರ್‌ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಬಯಸಿ ಶನಿವಾರ ಬಿಜೆಪಿ ಹಾಗೂ ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿ ಜಿಲ್ಲಾ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ನಂತರ ನೇರವಾಗಿ ಸೂಚಕರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಬಂದು ಉಮೇದುವಾರಿಕೆಯನ್ನು ದಾಖಲು ಮಾಡಿದರು.

ವಿಧಾನ ಪರಿಷತ್ ಸದಸ್ಯರಾದ ಅಮರನಾಥ ಪಾಟೀಲ, ರಘುನಾಥ ಮಲ್ಕಾಪುರೆ, ಶಾಸಕ ಪ್ರಭು ಚವಾಣ್‌ ಹಾಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಇದ್ದರು.

ಉತ್ತಮ ಪ್ರಜಾಕೀಯ ಪಾರ್ಟಿಯ ಅಭ್ಯರ್ಥಿಯಾಗಿ 36 ವರ್ಷದ ಬೀದರ್‌ನ ನಿವಾಸಿ ಅಂಬ್ರೇಶ್ ಕೆಂಚಾ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT