ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ ಬರಪೀಡಿತ ಘೋಷಿಸಿ, ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ಕೊಡಿ: ಭಗವಂತ ಖೂಬಾ

Published 1 ಸೆಪ್ಟೆಂಬರ್ 2023, 13:54 IST
Last Updated 1 ಸೆಪ್ಟೆಂಬರ್ 2023, 13:54 IST
ಅಕ್ಷರ ಗಾತ್ರ

ಬೀದರ್‌: ‘ಬೀದರ್‌ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ಎಂದು ಘೋಷಿಸಿ, ರೈತರ ಪ್ರತಿ ಹೆಕ್ಟೇರ್‌ ಜಮೀನಿಗೆ ₹50 ಸಾವಿರ ಪರಿಹಾರ ಕೊಡಬೇಕು’ ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.

ಭಾಲ್ಕಿ, ಹುಲಸೂರ ಮತ್ತು ಆಳಂದ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದರೆ ಆಗದು. ಬೇರೆ ತಾಲ್ಲೂಕುಗಳಲ್ಲಿಯೂ ಮಳೆ ಆಗಿಲ್ಲ. ಔರಾದ್‌, ಚಿಂಚೋಳಿ ತಾಲ್ಲೂಕುಗಳಲ್ಲಿ ಕುಡಿಯಲು ನೀರು ಸಿಗುತ್ತಿಲ್ಲ. ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಶೇಕಡಾ ನೂರರಷ್ಟು ಬಿತ್ತನೆಯಾಗಿದೆ. ಅದಕ್ಕಾಗಿ ರೈತರು ಹಣ ಖರ್ಚು ಮಾಡಿದ್ದಾರೆ. ರೈತರ ಬಳಿ ಸದ್ಯ ಹಣವಿಲ್ಲ. ಪಿ.ಎಂ.ಕಿಸಾನ್ ನಿಧಿಯಡಿ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ ₹4000 ಪ್ರೋತ್ಸಾಹ ಧನ ಕೂಡ ಬಂದ್‌ ಮಾಡಲಾಗಿದೆ. ರೈತರಿಗೆ ಗಾಯದ ಮೇಲೆ ಬರೆ ಎಳದಂತಾಗಿದೆ. ಕೂಡಲೇ ಆ ಹಣ ರೈತರ ಖಾತೆಗೆ ಜಮೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT