ಬುಧವಾರ, ಜುಲೈ 28, 2021
21 °C

ಅಧಿಕಾರ ವಹಿಸಿಕೊಂಡ ಭಗವಂತ ಖೂಬಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ನೂತನ ರಾಜ್ಯ ಸಚಿವ ಭಗವಂತ ಖೂಬಾ ನವದೆಹಲಿಯಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.

ಎರಡೂ ಇಲಾಖೆಗಳ ಕಚೇರಿಗಳಲ್ಲಿ ಪೂಜೆ ನೆರವೇರಿಸಿದ ಅವರು, ಅಧಿಕಾರಿಗಳ ಪರಿಚಯ ಮಾಡಿಕೊಂಡರು.
ದೇಶದ ಅಭಿವೃದ್ಧಿ ಹಾಗೂ ರೈತರ ಹಿತಕ್ಕಾಗಿ ಅಗತ್ಯ ಯೋಜನೆಗಳನ್ನು ರೂಪಿಸಲು ತಜ್ಞರು, ಹಿರಿಯ ಅಧಿಕಾರಿಗಳು ಹಾಗೂ ಅನುಭವಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ಇನ್ನೂ ಉತ್ತಮ ಆಡಳಿತ ಕೊಡಲು ಪ್ರಯತ್ನಿಸಲಾಗುವುದು ಎಂದು ಖೂಬಾ ತಿಳಿಸಿದರು.

ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸೂಕ್ ಮಂಡವಿಯಾ ಅವರ ನೇತೃತ್ವದಲ್ಲಿ ಇನ್ನಷ್ಟು ಯೋಜನೆಗಳನ್ನು ರೂಪಿಸಲಾಗುವುದು. ಉದ್ಯೋಗ ಸೃಷ್ಟಿ, ಯುವ ಸಮುದಾಯಕ್ಕೆ ತರಬೇತಿ, ಹೊಸ ಕಾಲೇಜುಗಳನ್ನು ಆರಂಭಿಸುವ ದಿಸೆಯಲ್ಲಿ ಬರುವ ದಿನಗಳಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಸಂಪುಟ ದರ್ಜೆ ಸಚಿವ ರಾಜಕುಮಾರ ಸಿಂಗ್ ಅವರ ನೇತೃತ್ವದ ನವೀಕರಿಸಬಹುದಾದ ಇಂಧನ ಮೂಲ ಸಚಿವಾಲಯದಿಂದ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳು, ಜನಸೇವಾ ಚಟುವಟಿಕೆಗಳ ಜಾರಿಗೆ ತಮ್ಮ ಸಲಹೆ, ಸೂಚನೆ ಹಾಗೂ ಸಹಕಾರ ಇರಲಿದೆ ಎಂದು ತಿಳಿಸಿದರು.

ಕರ್ನಾಟಕ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಸಚಿವಾಲಯಗಳಿಂದ ಆದ್ಯತೆ ಮೇರೆಗೆ ಎಲ್ಲ ಕೆಲಸ ಕಾರ್ಯಗಳು ಆಗಲಿವೆ. ಇತರೆ ಸಚಿವಾಲಯಗಳಿಂದ ಆಗಬೇಕಿರುವ ಕೆಲಸಗಳಿಗೆ ಸಂಬಂಧಿಸಿದವರ ಸಹಕಾರ ಪಡೆಯಲಾಗುವುದು. ಒಟ್ಟಾರೆ ರಾಜ್ಯ ಹಾಗೂ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು