ಮಂಗಳವಾರ, ಮೇ 24, 2022
22 °C

‘ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸಿ’: ಸಚಿವ ಭಗವಂತ ಖೂಬಾ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿಪಡಿಸುವಂತೆ ಕೇಂದ್ರ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರಿಗೆ ಕೇಂದ್ರದ ನೂತನ ಹಾಗೂ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಭೇಟಿ ಮಾಡಿದ ಖೂಬಾ ಅವರು, ‘ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಒದಗಿಸಿ ಅಭಿವೃದ್ಧಿಪಡಿಸುವ ಅಗತ್ಯ ಇದೆ ಎಂದು ಮನವರಿಕೆ ಮಾಡಲಾಗಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸ್ವದೇಶ ದರ್ಶನ ಯೋಜನೆ ಅಡಿ ಬೀದರ್ ಕೋಟೆ ಮತ್ತು ಕಲಬುರಗಿಯ ಖಾಜಾ ಬಂದೇ ನವಾಜ್ ದರ್ಗಾ ಮತ್ತು ಕೋಟೆಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಕೋರಲಾಗಿದೆ ಎಂದಿದ್ದಾರೆ.

ಗುರುದ್ವಾರ, ನರಸಿಂಹ ಝರಣಾ, ಸಿದ್ಧಾರೂಢ ಮಠ, ಅಷ್ಟೂರಿನ ಮಾಣಿಕ ಪ್ರಭು ಮಂದಿರ, ಪಾಪನಾಶ ಮಂದಿರ, ಮೈಲಾರ ಮಲ್ಲಣ್ಣ ದೇವಸ್ಥಾನಗಳಲ್ಲಿ ಯಾತ್ರಿಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಬೇಕು. ಜತೆಗೆ ಐತಿಹಾಸಿ ಸ್ಮಾರಕ ಪ್ರದೇಶಗಳ ಉನ್ನತ್ತೀಕರಣಕ್ಕೂ ಆದ್ಯತೆ ನೀಡುವಂತೆ ಒತ್ತಾಯಿಸಲಾಗಿದ ಎಂದು ತಿಳಿಸಿದ್ದಾರೆ.

ಬೀದರ್‌ನಲ್ಲಿ ಹಿಂದೂ, ಸೂಫಿ, ಸಿಖ್, ಬೌದ್ಧ, ಜೈನ, ಕ್ರಿಶ್ಚಿಯನ್ ಧರ್ಮೀಯರ ಮಹತ್ವದ ಧಾರ್ಮಿಕ ಸ್ಥಳಗಳಿವೆ. ಪ್ರಸಾದ ಯೋಜನೆ ಅಡಿಯಲ್ಲಿ ಯಾತ್ರಿಗಳ ವಾಸ್ತವ್ಯ, ಸಾರಿಗೆಯಂತಹ ಸೌಕರ್ಯಗಳನ್ನು ಒದಗಿಸಬೇಕು. ಶರಣರ ಜೀವನ ಹಾಗೂ ಸಂದೇಶಗಳ ಪ್ರಸಾರಕ್ಕಾಗಿ ಬಸವೇಶ್ವರರ ಕರ್ಮಭೂಮಿ ಬಸವಕಲ್ಯಾಣವನ್ನು ಅಭಿವೃದ್ಧಿಪಡಿ ಸುವಂತೆ ಮನವಿ ಮಾಡಲಾಗಿದೆ.
ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಪ್ರವಾಸಿ ತಾಣಗಳ ಅಭಿವೃದ್ಧಿಗೆ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

6 ಆಮ್ಲಜನಕ ಘಟಕ ಶೀಘ್ರವೇ ಲಭ್ಯ

ಬೀದರ್: ಜಿಲ್ಲೆಯಲ್ಲಿ ಆರು ಆಮ್ಲಜನಕ ಘಟಕಗಳು ನಿರ್ಮಾಣಗೊಂಡಿದ್ದು, ಶೀಘ್ರವೇ ಕಾರ್ಯಾರಂಭ ಮಾಡಲಿವೆ ಎಂದು ಕೇಂದ್ರದ ರಾಜ್ಯ ಖಾತೆ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ನೈಸರ್ಗಿಕ ಅನಿಲ್ ಮತ್ತು ಪೇಟ್ರೋಲಿಯಂ ಸಚಿವಾಲಯದಿಂದ ಸಿಎಸ್‌ಆರ್ ಅನುದಾನದಡಿ ಭಾಲ್ಕಿ, ಔರಾದ್, ಹುಮನಾಬಾದ್ ಮತ್ತು ಬಸವಕಲ್ಯಾಣ ಹಾಗೂ ಮರ್ಕ ಕಂಪನಿಯು ತನ್ನ ಸಿಎಸ್ಆರ್ ನಿಧಿಯಡಿ ನಗರದ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು ಪಿಎಂ ಕೇರ್ಸ್‌ನಿಂದ ಬ್ರೀಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ ಈ ಎಲ್ಲ ಘಟಕಗಳು ಕಾರ್ಯರೂಪಕ್ಕೆ ಬರಲಿವೆ. ಜಿಲ್ಲೆಯು ಸಂಭವನೀಯ ಕೋವಿಡ್- 3ನೇ ಅಲೆ ಎದುರಿಸಲು ಸರ್ವ ಸನ್ನದ್ದವಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು