ಭಾಲ್ಕಿ: ‘ಚಿತ್ರದುರ್ಗದಲ್ಲಿ ಮೇ. 9 ರಂದು ನಡೆಯಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಭಿಮಾನೋತ್ಸವದಲ್ಲಿ ಭಾಲ್ಕಿಯಿಂದ 1000 ಜನ ಕಾರ್ಯಕರ್ತರು, ಅಭಿಮಾನಿಗಳು ಭಾಗಿಯಾಗಲಿದ್ದಾರೆ’ ಎಂದು ಬಿಜೆಪಿ ಮುಖಂಡರೂ ಆದ ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಕರಪತ್ರ ಬಿಡುಗಡೆ ಸಮಾರಂಭ, ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ದೇಶದಲ್ಲಿಯೇ ಕೃಷಿ ಬಜೆಟ್ ಮಂಡಿಸಿದ ಪ್ರಥಮ ಮುಖ್ಯಮಂತ್ರಿ ಯಡಿಯೂರಪ್ಪನವರು ಆಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜ್ಯಾತ್ಯತೀತ ಮತ್ತು ಪಕ್ಷಾತೀತವಾಗಿ ನಡೆಯುವ ಕಾರ್ಯಕ್ರಮದಲ್ಲಿ ಭಾಲ್ಕಿ ತಾಲ್ಲೂಕು ವತಿಯಿಂದ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ ಇದೆ’ ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ವೀರಣ್ಣ ಕಾರಬಾರಿ ಮಾತನಾಡಿ, ‘ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲು ಬಿಜೆಪಿ ಸರ್ಕಾರ ರಚಿಸಿದ ಶ್ರೇಯಸ್ಸು ಬಿ.ಎಸ್.ವೈ ಅವರಿಗೆ ಸಲ್ಲುತ್ತದೆ. ಅವರು ಮುಖ್ಯಮಂತ್ರಿಯಾಗಿ ಅನೇಕ ಜನಾನುರಾಗಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಅವರ ಅಭಿಮಾನೋತ್ಸವದಲ್ಲಿ ಹೆಚ್ಚಿನ ಜನರು ಭಾಗವಹಿಸಬೇಕು’ ಎಂದು ತಿಳಿಸಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಶಿವರಾಜ ಗಂದಗೆ ಮಾತನಾಡಿ, ‘ತಾಲ್ಲೂಕಿನ ಜನ ದುರಾಡಳಿತ, ದಬ್ಬಾಳಿಕೆಯ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಭಾಲ್ಕಿಯಲ್ಲಿ ಜನತೆ ಪರಿವರ್ತನೆ ಬಯಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಭಾಲ್ಕಿಯಲ್ಲಿ ಮತ್ತೆ ಬಿಜೆಪಿ ಪಕ್ಷ ಗೆಲ್ಲುವುದು ಖಚಿತ’ ಎಂದರು.

ಗೋವಿಂದರಾವ್ ಬಿರಾದಾರ, ವಿಜಯಕುಮಾರ ಪಾಟೀಲ, ಸುಭಾಷ ಬಿರಾದಾರ ಬೀರಿ (ಬಿ), ಸಂತೋಷ ಪಾಟೀಲ, ಮನ್ಮಥ ಸ್ವಾಮಿ, ರೇವಣಸಿದ್ದ ಜಾಡರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-33-1982532986

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.