ನಿವೃತ್ತ ಐಪಿಎಸ್ ಅಧಿಕಾರಿ, ಆತ್ಮಕಥನದ ಲೇಖಕ ಡಿ.ವಿ.ಗುರುಪ್ರಸಾದ ಮಾತನಾಡಿ, ‘ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಕಷ್ಟಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೆ ಧೈರ್ಯಶಾಲಿಗಳಾಗಿ ಮುನ್ನುಗ್ಗಬೇಕು. ಅಂದಾಗ ಮಾತ್ರ ಮಹೋನ್ನತ ಸಾಧನೆ, ಯಶಸ್ವಿ ಜೀವನ ನಡೆಸಲು ಸಾಧ್ಯ’ ಎಂದು ಮಾರ್ಮಿಕ ಉದಾಹರಣೆ ಸಹಿತ ತಿಳಿಸಿದರು.