ಭಾಲ್ಕಿ: ‘ಸಾರ್ವಜನಿಕರ ಅನುಕೂಲಕ್ಕಾಗಿ ಪಟ್ಟಣದ ತಹಶೀಲ್ದಾರ್ ಕಚೇರಿ ಪಕ್ಕದ ಪುರಭವನದಲ್ಲಿ ಸರ್ಕಾರಿ ಆಧಾರ್ ಸೇವಾ ಕೇಂದ್ರವನ್ನು ತಕ್ಷಣ ಆರಂಭಿಸಬೇಕು’ ಎಂದು ಕರ್ನಾಟಕ ಹೊಯ್ಸಳ ವೇದಿಕೆ ಜಿಲ್ಲಾಧ್ಯಕ್ಷ ಸಂತೋಷ್ ನಾಟೇಕರ್ ಆಗ್ರಹಿಸಿದ್ದಾರೆ.

ಈ ಸಂಬಂಧ ಉಪ ತಹಶೀಲ್ದಾರ್ಗೆ ಮನವಿ ಸಲ್ಲಿಸಿದ ಅವರು, ‘ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಬರುವ ವಯೋವೃದ್ಧರು, ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರು ಖಾಸಗಿ ಆಧಾರ್ ಕೇಂದ್ರಗಳಿಗೆ ತೆರಳಿ ಬೆಳಿಗ್ಗೆಯಿಂದ ಸಂಜೆವರೆಗೆ ಸರದಿ ಸಾಲಿನಲ್ಲಿ ನಿಂತು ಸೇವೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ಖಾಸಗಿ ಆಧಾರ್ ಸೇವಾ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ಮಕ್ಕಳ ಬಯೋಮೆಟ್ರಿಕ್ ಅಪ್ಡೇಟ್ ಉಚಿತವಾಗಿದ್ದರೂ ಸಹ ಸಾರ್ವಜನಿಕರಿಂದ ಹಣ ಪಡೆದುಕೊಳ್ಳಲಾಗುತ್ತಿದೆ’ ಎಂದು ದೂರಿದರು.

ಪ್ರವೀಣ ಮೋರೆ, ತುಕಾರಾಂ ಕಾಸ್ಲೆ, ಶಾಲಿವಾನ, ಯಲೇಶ್, ಸಿದ್ದು ಜಮಾದಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-33-1101900329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.