ಭಾಲ್ಕಿ: ಪಟ್ಟಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನ ಮತ್ತು ಅಮೃತ ಮಹೋತ್ಸವ ಸಮಿತಿ ವತಿಯಿಂದ ಏ.22 ರಂದು ನಡೆಯಲಿರುವ ಶತಾಯಷಿ ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ ಮತ್ತು ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭಕ್ಕೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗಿದೆ.

ನವದೆಹಲಿಯ ಉಪರಾಷ್ಟ್ರಪತಿಗಳ ಭವನದಲ್ಲಿ ಸಂಸದ ಸಾಗರ್ ಖಂಡ್ರೆ ನೇತೃತ್ವದಲ್ಲಿ ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಭೇಟಿ ನೀಡಿ ಉರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಆಹ್ವಾನ ನೀಡಿದರು.

ಗಡಿಭಾಗದಲ್ಲಿ ಹಿರೇಮಠ ಸಂಸ್ಥಾನ ನೀಡುತ್ತಿರುವ ಜನಪರ ಮತ್ತು ಜೀವಪರ ಸೇವೆಯನ್ನು ಉಪರಾಷ್ಟ್ರಪತಿಗಳ ಗಮನಕ್ಕೆ ತರಲಾಗಿದ್ದು, ಅವರು ಏ.22 ರಂದು ನಡೆಯಲಿರುವ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೊತ್ಸವ ಮತ್ತು ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದರು.

ಖರ್ಗೆಗೆ ಆಹ್ವಾನ: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ಬೆಂಗಳೂರಿನ ನಿವಾಸದಲ್ಲಿ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಭೇಟಿಯಾಗಿ ಅಮೃತ ಮಹೋತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷ ಶಶಿಧರ ಕೋಸಂಬೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-33-308099033

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.