ಆದರೆ, ಹಣ ಕದಿಯುವ ಅವರ ಯತ್ನ ವಿಫಲವಾಗಿದೆ. ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಭೇಟಿ ಕೊಟ್ಟು ಮಾಹಿತಿ ಕಲೆ ಹಾಕಿದ್ದಾರೆ. ಎಟಿಎಂ ಯಂತ್ರದಲ್ಲಿರುವ ಗುಪ್ತ ಕ್ಯಾಮೆರಾದಿಂದ ಕಳ್ಳರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ತಿಳಿಸಿದ್ದಾರೆ.