ಭಾಲ್ಕಿ: ‘ಬಸವ ಜಯಂತಿ, ವಚನ ಜಾತ್ರೆ-2026 ಮತ್ತು ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ತ ಪಟ್ಟಣದಲ್ಲಿ ಬರುವ ಏಪ್ರಿಲ್ನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳು ಜರುಗಲಿವೆ’ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಪಟ್ಟಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನ ಮತ್ತು ಅಮೃತ ಮಹೋತ್ಸವ ಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಕಾರ್ಯಾಲಯ ಉದ್ಘಾಟನೆ ಮತ್ತು ಪ್ರಚಾರ ರಥ ಚಾಲನೆ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ಏಪ್ರಿಲ್ 1ರಿಂದ ಪ್ರವಚನ ಸೇರಿ ಮುಂತಾದ ಅರ್ಥಪೂರ್ಣ ಕಾರ್ಯಕ್ರಮಗಳು ಆರಂಭಗೊಂಡು ಏ.22ಕ್ಕೆ ಸಮಾರೋಪಗೊಳ್ಳಲಿವೆ. ನಾಡಿನ ನಾನಾ ಮಠಾಧೀಶರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ, ರಾಜ್ಯ ಸಚಿವರು, ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ’ ಎಂದರು.

‘ಮಾಹಿತಿ ವಿನಿಮಯ ಮಾಡಿಕೊಳ್ಳಲು ಕಾರ್ಯಾಲಯ ತೆರೆಯಲಾಗಿದೆ. ಪ್ರಚಾರ ರಥ ಜಿಲ್ಲೆಯಾದ್ಯಂತ ಸಂಚರಿಸಿ ಸಮಾರಂಭದ ಉಪಯುಕ್ತ ಮಾಹಿತಿ ನೀಡಲಿದೆ’ ಎಂದು ತಿಳಿಸಿದರು.

ನಾರಾಯಣ ಖೇಡ ಮುನ್ಸಿಪಲ್ ಅಧ್ಯಕ್ಷ ನಾಗೇಶ ಶೆಟಕಾರ್ ಕಾರ್ಯಾಲಯ ಉದ್ಘಾಟಿಸಿದರು.

ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಚನ್ನಬಸವ ಪಟ್ಟದ್ದೇವರು ಬ್ಯಾಂಕ್ನ ಅಧ್ಯಕ್ಷ ಡಿ.ಕೆ.ಸಿದ್ರಾಮ, ಯುವ ಮುಖಂಡ ಶಿವು ಲೋಖಂಡೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ಸೋಮನಾಥಪ್ಪ ಅಷ್ಟೂರೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-33-625925267

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.