ಭಾಲ್ಕಿ: ‘ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು’ ಎಂದು ನಿರಂಜನ ಸಂಸ್ಥಾನ ಮಠದ ಶಿವಯೋಗೀಶ್ವರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಅಪೆಕ್ಸ್ ಡೆಂಟಲ್ ಕ್ಲಿನಿಕ್ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಗ್ರಾಮೀಣ ಜನರು ಕಾಲ ಕಾಲಕ್ಕೆ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡುವುದು ವಿರಳ. ಜಾತ್ರಾ ಮಹೋತ್ಸವ ಅಂಗವಾಗಿ ಗ್ರಾಮೀಣ ಭಾಗದಲ್ಲಿ ಇಂತಹ ಶಿಬಿರ ಆಯೋಜಿಸಿರುವುದರಿಂದ ಬಡ ಜನರಿಗೆ ಅನುಕೂಲವಾಗಿದೆ’ ಎಂದು ತಿಳಿಸಿದರು.

ಗುರುಬಸವ ಸ್ವಾಮೀಜಿ ನೇತೃತ್ವ ವಹಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ವೀರಭದ್ರೇಶ್ವರ ದೇವಸ್ಥಾನದ ಅಧ್ಯಕ್ಷ ಮಹಾದೇವ ಬೇಲೂರೆ ಮಾತನಾಡಿ, ‘ಗ್ರಾಮಸ್ಥರ ಸಹಕಾರದಿಂದ ಸೇವಾ ಮನೋಭಾವದಿಂದ ಈ ಶಿಬಿರ ಆಯೋಜಿಸಿದ್ದು, ನೂರಾರು ಜನರು ಇದರ ಪ್ರಯೋಜನ ಪಡೆದರು’ ಎಂದು ತಿಳಿಸಿದರು.

ಡಾ.ಅನಿಲ್ ಹನಪಟ್ಟೆ, ಡಾ.ಸುನಿಲ್ ಹನಪಟ್ಟೆ ಮತ್ತು ಶಿವಾಜಿ ಗುರ್ದಾಳೆ ಅವರು ಜನರ ಆರೋಗ್ಯ ತಪಾಸಣೆ ನಡೆಸಿದರು.

ಗ್ರಾ.ಪಂ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ, ಪ್ರಮುಖರಾದ ಶ್ರೀಕಾಂತ ಭೋರಾಳೆ ಸೇರಿದಂತೆ ಹಲವರು ಹಾಜರಿದ್ದರು.

ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ವೀರಭದ್ರೇಶ್ವರ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಹಣಮಂತರಾವ ಚವ್ಹಾಣ, ದೇಗುಲದ ಅಧ್ಯಕ್ಷ ಮಹಾದೇವ ಬೇಲೂರೆ, ಪ್ರಮುಖರಾದ ಕಾಶಿನಾಥ ಲದ್ದೆ, ವಿಶ್ವ ಹೂಗಾರ, ಸಂಜಕುಮಾರ ಚಿದ್ರೆ ಸೇರಿದಂತೆ ಹಲವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-33-697935703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.