ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ| ಬೆಳೆಹಾನಿ; ಜಂಟಿ ಸಮೀಕ್ಷೆಗೆ ಒತ್ತಾಯ

Published 3 ಆಗಸ್ಟ್ 2023, 15:51 IST
Last Updated 3 ಆಗಸ್ಟ್ 2023, 15:51 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನ ಗಡಿಭಾಗ ಸೇರಿ ವಿವಿಧೆಡೆ ಮುಂಗಾರು ಬೆಳೆಹಾನಿ ಸಂಭವಿಸಿದ್ದು, ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ತಾಲ್ಲೂಕು ರೈತ ಸಂಘ ಒತ್ತಾಯಿಸಿದೆ.

ಈ ಕುರಿತು ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ನೇತೃತ್ವದಲ್ಲಿ ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ಗಡಿ ಭಾಗದ ಪಾಂಡರಿ, ಖುದವಂತಪೂರ, ಹಲಸಿ(ಎಲ್), ಇಂಚೂರು, ಗೋರಚಿಂಚೋಳಿ, ಲಖನಗಾಂವ, ತಳವಾಡ(ಕೆ), ಹಜನಾಳ, ಕುಂಟೆಸಿರ್ಸಿ, ನಿಡೇಬಾನ ಸೇರಿದಂತೆ ಮುಂತಾದ ಗ್ರಾಮಗಳಲ್ಲಿ ಮುಂಗಾರಿನ ಆರಂಭದಲ್ಲಿ ಮಳೆ ಕೊರತೆಯಿಂದ ಬಿತ್ತನೆಯಾದ ಬೆಳೆಗಳು ಮೊಳಕೆಯೊಡೆಯದೇ ಹಾಳಾಗಿವೆ. ಜುಲೈ ತಿಂಗಳಿನಲ್ಲಿ ಬಿತ್ತನೆ ಕಂಡ ಸೋಯಾ ಅವರೆ, ತೊಗರಿ, ಉದ್ದು, ಹೆಸರು ಸೇರಿ ವಿವಿಧ ಬೆಳೆಗಳು ಮತ್ತು ತೋಟಗಾರಿಕೆ ಬೆಳೆಗಳು ವಾಡಿಕೆಗಿಂತ ಹೆಚ್ಚು ಸುರಿದ ಮಳೆಗೆ ಜಲಾವೃತಗೊಂಡು ನಷ್ಟಕ್ಕಿಡಾಗಿವೆ ಎಂದರು.

ಸಾಲ ಮಾಡಿ ಬಿತ್ತನೆ ಮಾಡಿದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಬೆಳೆಹಾನಿ ಸಮೀಕ್ಷೆ ಪಾರದರ್ಶಕವಾಗಿ ನಡೆಸಿ ಸರ್ಕಾರಕ್ಕೆ ಸಮರ್ಪಕ ವರದಿ ಸಲ್ಲಿಸಿ ಅರ್ಹ ರೈತರಿಗೆ ಪರಿಹಾರ ಸಿಗುವಂತೆ ನೋಡಿಕೊಳ್ಳಬೇಕು. ಬೆಳೆಹಾನಿ ಸಮೀಕ್ಷೆಗೆ ವಿಳಂಬ ನೀತಿ ಅನುಸರಿಸಿದರೆ ಬೀದಿಗಿಳಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಮನವಿ ಪತ್ರದಲ್ಲಿ ಎಚ್ಚರಿಸಿದ್ದಾರೆ.

ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬಾಬುರಾವ್ ಜೋಳದಾಪಕೆ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ, ಶೇಷಾರಾವ್ ಕಣಜೆ, ಭಾವುರಾವ್ ಪಾಟೀಲ, ಶ್ರೀರಂಗ ಗಾಜರೆ, ನಾಗಶೆಟೆಪ್ಪ ಖಂದಾರೆ, ಬಾಬುರಾವ್ ಸೋನಜಿ, ಬಾಬುರಾವ್ ಭಾಸಗೆ, ಸತ್ಯವಾನ ಸೂರ್ಯವಂಶಿ, ನಾಗಶೆಟ್ಟಿ ಲಂಜವಾಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT