ಭಾಲ್ಕಿ: ತಾಲ್ಲೂಕಿನ ರೈತರಿಗೆ ಮುಂಗಾರು ಹಂಗಾಮಿಗೆ ಅಗತ್ಯವಿರುವಷ್ಟು ಬಿತ್ತನೆ ಬೀಜಗಳು ಲಭ್ಯವಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಾಸಕ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತಾಲ್ಲೂಕಿನ ವಿವಿಧ ಕೃಷಿ ಕೇಂದ್ರಗಳ ಮೂಲಕ ರೈತರಿಗೆ ಬಿತ್ತನೆ ಬೀಜಗಳ ವಿತರಣೆಯನ್ನು ಈಗಾಗಲೇ ಆರಂಭಿಸಲಾಗಿದ್ದು, ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಪ್ರಮಾಣದ ಬೀಜಗಳ ಸಂಗ್ರಹವನ್ನು ಮಾಡಲಾಗಿದೆ. ರೈತರಿಗೆ ಸಮಯಕ್ಕೆ ಸರಿಯಾಗಿ ಗುಣಮಟ್ಟದ ಬೀಜಗಳು ದೊರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಿತ್ತನೆ ಅವಧಿಯಲ್ಲಿ ಬೀಜಗಳ ಕೊರತೆ ಉಂಟಾಗದಂತೆ ನಿರಂತರವಾಗಿ ಮೇಲ್ವಿಚಾರಣೆ ವಹಿಸಲಾಗುತ್ತಿದೆ. ರೈತರು ಸರ್ಕಾರದ ಮಾನ್ಯತೆ ಪಡೆದ ಕೇಂದ್ರಗಳಿಂದಲೇ ಬೀಜಗಳನ್ನು ಪಡೆದು ಮುಂಗಾರು ಕೃಷಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-33-912393943

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.