ಭಾಲ್ಕಿ: ಪಟ್ಟಣದ ವಿವಿಧೆಡೆ ಒತ್ತುವರಿಯಾಗಿದ್ದ ಫುಟ್ಪಾತ್, ಸರ್ಕಾರಿ ಸ್ಥಳವನ್ನು ಪುರಸಭೆ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳ ಸಹಾಯದೊಂದಿಗೆ ಗುರುವಾರ ತೆರವುಗೊಳಿಸಿದರು.

ಪಟ್ಟಣದ ಬಸ್ ನಿಲ್ದಾಣದಿಂದ ಅಂಬೇಡ್ಕರ್ ವೃತ್ತ, ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ಮೂರ್ತಿವರೆಗೆ ಸೇರಿದಂತೆ ಪಟ್ಟಣದ ವಿವಿಧೆಡೆ ಅಂಗಡಿಗಳ ಮಾಲೀಕರು ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದ ಪಟ್ಟಣದಲ್ಲಿ ಸಂಚಾರ ದಟ್ಟಣೆ ಸೇರಿದಂತೆ ಸಾರ್ವಜನಿಕರ ಸುಗಮ ಓಡಾಟಕ್ಕೆ ತುಂಬಾ ಅನಾನುಕೂಲವಾಗಿತ್ತು.

ಈ ಕುರಿತು ಅನೇಕ ಸಾರ್ವಜನಿಕ ದೂರುಗಳು ಬಂದ ಹಿನ್ನೆಲೆಯಲ್ಲಿ. ಪುರಸಭೆ ಅಧಿಕಾರಿಗಳು ಅನೇಕ ಸಲ ಪಾದಾಚಾರಿ ಮಾರ್ಗ ತೆರವಿಗೆ ನೋಟಿಸ್ ನೀಡಿದ್ದರು. ಆದರೂ ಪಾದಚಾರಿ ಮಾರ್ಗದ ಅತಿಕ್ರಮಣ ತೆರವು ಆಗಿರಲಿಲ್ಲ. ಹಾಗಾಗಿ ಪುರಸಭೆ ಅಧಿಕಾರಿಗಳು ಪೊಲೀಸರ ಸಹಾಯದೊಂದಿಗೆ ಪಾದಚಾರಿ ಮಾರ್ಗಗಳ ಮೇಲಿದ್ದ ಅಂಗಡಿಗಳ ಸಾಮಾನುಗಳನ್ನು ಪುರಸಭೆ ವಾಹನಗಳಲ್ಲಿ ಪೌರಕಾರ್ಮಿಕರೊಂದಿಗೆ ತುಂಬಿಕೊಂಡು ಒಯ್ದರು.

ಈ ಸಂದರ್ಭದಲ್ಲಿ ಕೆಲ ಅಂಗಡಿಯವರು ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು. ಈ ಸಂಧರ್ಭದಲ್ಲಿ ಪುರಸಭೆ ಸಹಾಯಕ ಅಭಿಯಂತರ ಅಮರ ಮಠಪತಿ, ಪ್ರಭಾರಿ ಕಂದಾಯ ನಿರೀಕ್ಷಕ ಸಂತೋಷ ಬಲಪ್ಪ ನಂದಗಾವಿ, ಸಿಪಿಐ ಅಮರೇಶ ಬಿ. ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-33-508264827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.