ಭಾಲ್ಕಿ: ಪಟ್ಟಣದ ಭಾರತ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಭಾನುವಾರ ಗ್ಯಾಸ್ ಸಿಲಿಂಡರ್ ಪಡೆಯಲು ಜನರು ಸರದಿ ಸಾಲಿನಲ್ಲಿ ಬಿರು ಬಿಸಿಲಿನಲ್ಲಿ ಪರದಾಡುತ್ತಿದ್ದ ದೃಶ್ಯ ಕಂಡು ಬಂತು.

ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಹಳ್ಳಿಗಳ ಜನರು ಗ್ಯಾಸ್ ಏಜೆನ್ಸಿ ಬಳಿ ನಸುಕಿನ ಜಾವದಿಂದಲೇ ಖಾಲಿ ಸಿಲಿಂಡರ್ ನೊಂದಿಗೆ ಸರತಿ ಸಾಲಿನಲ್ಲಿ ನಿಂತಿದ್ದರು.

ಆನ್ಲೈನ್ ಮೂಲಕ ಗ್ಯಾಸ್ ಸಿಲಿಂಡರ್ ಬುಕ್ ಮಾಡಿದರೂ ಸಕಾಲಕ್ಕೆ ಸಿಲಿಂಡರ್ ಸಿಗುತ್ತಿಲ್ಲ. ಎಂದು ಗ್ರಾಹಕರು ದೂರಿದರು.

ಗ್ಯಾಸ್ ಏಜೆನ್ಸಿಯಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಿದೆ. ಹಾಗಾಗಿ, ಇನ್ನೊಂದು ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಆಗುವುದನ್ನು ತಾಲ್ಲೂಕು ಆಡಳಿತ ತಡೆಯಬೇಕು. ಸಕಾಲಕ್ಕೆ ಸಾರ್ವಜನಿಕರಿಗೆ ಗ್ಯಾಸ್ ಲಭಿಸುವಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-33-569217725

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.