ಭಾಲ್ಕಿ: ಪಟ್ಟಣದ ಉಪನ್ಯಾಸಕರ ಬಡಾವಣೆಯಲ್ಲಿರುವ ಗುರು ಕಾಲೊನಿಗೆ ಮೂಲಸೌಕರ್ಯ ಒದಗಿಸಲು ಪ್ರಮುಖರಾದ ಆಕಾಶ ಕಲ್ಯಾಣೆ ಆಗ್ರಹಿಸಿದ್ದಾರೆ.

ಈ ಸಂಬಂಧ ಪುರಸಭೆ ಮುಖ್ಯಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಗುರು ಕಾಲೊನಿಯಲ್ಲಿ ವಿದ್ಯುತ್ ಕಂಬ ಅಳವಡಿಸಿ ಬೆಳಕಿನ ವ್ಯವಸ್ಥೆ ಮಾಡಬೇಕು. ಈ ಓಣಿಗಳಲ್ಲಿ ಬೀದಿ ವಿದ್ಯುತ್ ದೀಪ ಇಲ್ಲದ ಕಾರಣ ರಾತ್ರಿ ಸಾರ್ವಜನಿಕರು ತಿರುಗಾಡಲು ಭಯಭೀತರಾಗಿದ್ದಾರೆ. ಹಾವು, ಚೇಳುಗಳ ಹಾವಳಿ ಹೆಚ್ಚಾಗಿದೆ. ಅಲ್ಲದೆ ಕಳ್ಳಕಾಕರ ಭೀತಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಕೆಲವು ಕಡೆ ಒಳಚರಂಡಿ ನಿರ್ಮಿಸಿದ್ದಾರೆ. ಚರಂಡಿ ಪಕ್ಕದಲ್ಲಿ ಸುಮಾರು 5-6 ಅಡಿ ಆಳವಾದ ತಗ್ಗಿರುವುರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಪುರಸಭೆ ಮುಖ್ಯಾಧಿಕಾರಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈಗಲಾದರೂ ಸಂಬಂಧಪಟ್ಟವರು ಇತ್ತ ಕಡೆ ಮುಖ ಮಾಡಿ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-33-1317534826

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.